ಬೆಂಗಳೂರು : ಬೆಂಗಳೂರಿನಲ್ಲಿ 4 ವಿವಿಧ ಸ್ಥಳಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಪ್ರತಿ ಎಣಿಕಾ ಕೊಠಡಿಗೆ ಸಾಮಾನ್ಯವಾಗಿ 10 ರಿಂದ 14 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಅದರಲ್ಲಿ 2 ಟೇಬಲ್ ಪೋಸ್ಟಲ್ ಬ್ಯಾಲೆಟ್ ಮತಗಳ ಎಣಿಕೆಗೆ ಮೀಸಲಿಡಲಾಗಿರುತ್ತದೆ ಎಂದರು.
ಚುನಾವಣೆಯ ಮತ ಎಣಿಕೆ ಕಾರ್ಯವು ಮೇ. 13 ರಂದು ನಡೆಯಲಿದ್ದು, ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಮೂರು ಹಂತದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ ಇನ್ನೂ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ನಲ್ಲಿ ದೋಷ ಕಂಡುಬರಲ್ಲ. ಆ ರೀತಿ ಏನಾದರೂ ದೋಷ ಕಂಡುಬಂದರೆ, ನಾವು ತಕ್ಷಣವೇ ಇವಿಎಂ ಮಷಿನ್ ಬದಲಾವಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.
“ಮಾಸ್ಟರಿಂಗ್ ಸೆಂಟರ್‌ನಲ್ಲಿ ತಿಂಡಿ, ಊಟದ ವ್ಯವಸ್ಥೆ ಮಾಡಲಿದ್ದೇವೆ. ನಿಯೋಜಿತ ಸಿಬ್ಬಂದಿ ಆಯಾ ಮಾಸ್ಟರಿಂಗ್ ಸೆಂಟರ್‌ಗಳಲ್ಲಿ ಇವಿಎಂ ಪಡೆದು ಸಂಜೆ ವೇಳೆಗೆ ನಿಗದಿಪಡಿಸಿದ ಮತಗಟ್ಟೆಗೆ ತೆರಳುತ್ತಾರೆ. ನಾವು ಈಗಾಗಲೇ ರೂಟ್ ಮ್ಯಾಪ್ ತಯಾರಿ ಮಾಡಿದ್ದೇವೆ ಎಂದು ವಿವರಿಸಿದರು.