ಶಿವಮೊಗ್ಗ: ನಗರದ ಹೊಳೆಹೊನ್ನೂರಿನಲ್ಲಿ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, 50 ಜನರ ತಂಡ ಮಾಡಿ ಇಬ್ಬರನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಮೂರು ದಿನಗಳ ಹಿಂದೆ ಗಾಂಧಿ ಪ್ರತಿಮೆ ಧ್ವಂಸ ಗೊಳಿಸಿದ್ದರು. ನಾನು ಸಹ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣವನ್ನು ಚಾಲೆಂಜ್ ಆಗಿ ತಗೊಂಡಿದ್ದೆವು. ನಮ್ಮ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸೇರಿ ಪ್ರಕರಣ ಭೇದಿಸಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನ ಇಸ್ರೋ ಕಚೇರಿಗೆ ಮೋದಿ ಭೇಟಿ ; ಅದ್ದೂರಿ ಸ್ವಾಗತಕ್ಕೆ ಬಿಜೆಪಿ ಪ್ಲಾನ್
ಗಣೇಶ (24) ಹಾಗೂ ವಿನಯ್ (25) ಬಂಧಿತ ಆರೋಪಿಗಳಾಗಿದ್ದು, ಇಬ್ಬರೂ ಆರೋಪಿಗಳು ಕೃಷಿ ಕೆಲಸ ಮಾಡಿಕೊಂಡಿದ್ದವರು. ಇಬ್ಬರು ಆರೋಪಿಗಳು ಚಿತ್ರದುರ್ಗ ಜಿಲ್ಲೆಯ ಪಂಡ್ರುಹಳ್ಳಿ ಮೂಲದವರಾಗಿದ್ದಾರೆ. ಸದ್ಯ ಇಬ್ಬರ ವಿಚಾರಣೆ ಮುಂದುವರೆದಿದೆ ಎಂದು ಎಸ್‌ಪಿ ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿ ಕಠಿಣ ಕ್ರಮದ ಭರವಸೆ ನೀಡಿದ್ದರು. ಜೊತೆಗೆ ಸ್ಥಳದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.