ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಚುನಾವಣೆ ಸ್ಪರ್ಧಿಸಲು ರಣತಂತ್ರ ಹೆಣೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಸಭೆ ನಾಳೆಯಿಂದ ಎರಡು ದಿನ ನಿಗದಿಯಾಗಿದೆ. ಮುಂಬೈನ ಪಂಚತಾರಾ ಹೋಟೆಲ್‌ನಲ್ಲಿ 3ನೇ ಸಭೆ ನಡೆಯಲಿದೆ.
ಎನ್‌ಸಿಪಿಯ ಶರದ್ ಪವಾರ್ ಬಣ, ಉದ್ಧವ್ ಠಾಕ್ರೆ ಬಣ ಮತ್ತು ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷದ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದೇ ಸಭೆಯಲ್ಲಿ I.N.D.I.A ಒಕ್ಕೂಟದ ಲೋಗೋ ರಿವೀಲ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಲೋಕಸಭಾ ಚುನಾವಣೆ: 155 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಲಿದೆ ಬಿಜೆಪಿ!
ಜೊತೆಗೆ ಸೀಟು ಹಂಚಿಕೆ, ಚುನಾವಣಾ ಪೂರ್ವ ತಯಾರಿ ಸಂಬಂಧಿ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸಗಢ ಹಾಗೂ ಮಿಜೋರಾಂ ವಿಧಾನಸಭಾ ಚುನಾವಣೆಗಳಿಗೆ ವಿಪಕ್ಷಗಳ ಕಾರ್ಯತಂತ್ರದ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
ಇಂಡಿಯಾ ಮೈತ್ರಿಕೂಟಕ್ಕೆ ಕೆಲವು ಹೊಸ ಪಕ್ಷಗಳ ಸೇರ್ಪಡೆ ಬಗ್ಗೆಯೂ ಚರ್ಚಿಸಲಾಗುವುದು ಎಂದು ತಿಳಿದುಬಂದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಕ್ಷಗಳ ಬಣವನ್ನು ವಿಸ್ತರಿಸುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದಾರೆ. ಇದರ ಜೊತೆ ನಾಳೆ ನಡೆಯಲಿರುವ ಸಭೆಗೆ ಈಗಾಗಲೇ ಹಲವು ನಾಯಕರು ಮುಂಬೈ ತಲುಪಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.