Monday, December 11, 2023
spot_img
- Advertisement -spot_img

Nipah Virus: ಕೇರಳದಲ್ಲಿ ನಿಫಾ ವೈರಸ್‌ಗೆ ಇಬ್ಬರು ಸಾವು

ನವದೆಹಲಿ: ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಇಬ್ಬರು ನಿಫಾ ವೈರಸ್‌ನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಖಚಿತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಯಲ್ಲಿ ಎರಡು ಅಸ್ವಾಭಾವಿಕ ಸಾವು ಸಂಭವಿಸಿತ್ತು ಎಂದು ವರದಿಯಿಂದ ತಿಳಿದುಬಂದಿತ್ತು. ಆದ್ರೆ ಈಗ ನಿಫಾದಿಂದ ಎಂದು ತಿಳಿದುಬಂದಿದೆ. “ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ನಿಫಾ ವೈರಸ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಹಾಯ ಮಾಡಲು ಕೇಂದ್ರ ತಂಡವನ್ನು ಕೇರಳಕ್ಕೆ ಕಳುಹಿಸಲಾಗಿದೆ” ಎಂದು ತಿಳಿಸಿದ್ದಾರೆ.

ಕೇರಳ ಕೋಝಿಕ್ಕೋಡ್‌ನಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಬಳಸಲು ಜನರಿಗೆ ಸಲಹೆ ನೀಡಿದೆ. ಇದಕ್ಕೂ ಮುನ್ನ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಜನರು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದು, ಸಂತ್ರಸ್ತರೊಂದಿಗೆ ನಿಕಟ ಸಂಪರ್ಕದಲ್ಲಿದ್ದವರು ಚಿಕಿತ್ಸೆ ಪಡೆಯಿರಿ , ಯಾವುದೇ ಆತಂಕ ಬೇಡ ಎಂದು ಧೈರ್ಯ ತುಂಬಿದ್ದಾರೆ.

ಇಬ್ಬರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ, ಇದಕ್ಕೆ ಮುನ್ನೆಚ್ಚರಿಕೆ ವಹಿಸೋದೇ ಅಗತ್ಯವಾಗಿದೆ, ಆರೋಗ್ಯ ಇಲಾಖೆ ಸಿದ್ಧಪಡಿಸಿರುವ ಕ್ರಿಯಾ ಯೋಜನೆಗೆ ಎಲ್ಲರೂ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ನಿಫಾ ವೈರಸ್‌ ಹೇಗೆ ಹರಡುತ್ತದೆ ?

ವಿಶ್ವ ಆರೋಗ್ಯ ಸಂಸ್ಥೆ ಅಥವಾ WHO ಪ್ರಕಾರ ನಿಫಾ ವೈರಸ್ ಬಾವಲಿಗಳಿಂದ ಹರಡುತ್ತದೆ, ಮತ್ತು ಇದು ಮನುಷ್ಯರಿಗೆ ಮತ್ತು ಪ್ರಾಣಿಗಳಿಗೆ ಮಾರಕವಾಗಿದೆ. ಉಸಿರಾಟದ ಕಾಯಿಲೆಯ ಜೊತೆಗೆ, ಇದು ಜ್ವರ, ಸ್ನಾಯು ನೋವು, ತಲೆನೋವು, ಜ್ವರ, ತಲೆತಿರುಗುವಿಕೆ ಮತ್ತು ವಾಕರಿಕೆ ಇವು ಇದರ ಲಕ್ಷಣಗಳಾಗಿವೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles