ಉಡುಪಿ: ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಯು.ಆರ್ ಸಭಾಪತಿ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್.ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಉಡುಪಿಯ ಸ್ವಗೃಹದಲ್ಲಿ ಕೊನೆಯುಸಿರೆಳೆಸಿದ್ದಾರೆ.
ಯು.ಆರ್ ಸಭಾಪತಿ ರಾಜಕೀಯ ಪ್ರವೇಶಕ್ಕೆ ಆಸ್ಕರ್ ಫರ್ನಾಂಡಿಸ್ ಪ್ರೇರಣೆಯಾಗಿದ್ದು, ಬಂಗಾರಪ್ಪ ಅನುಯಾಯಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಉಡುಪಿ ಕ್ಷೇತ್ರದಿಂದ 2 ಬಾರಿ ಶಾಸಕರಾಗಿದ್ದ ಯು.ಆರ್.ಸಭಾಪತಿ ಅವರ ಅಗಲಿಕೆಗೆ ರಾಜಕೀಯ ನಾಯಕರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
1987 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್‌ನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಇವ್ರು, ಪರಿಷತ್ ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು ಅದೇ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
1999 ರಲ್ಲಿ ಕೈ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು.ಯು.ಆರ್ ಸಭಾಪತಿ ಅವರು ರಾಜಕೀಯ ಪ್ರವೇಶಕ್ಕೆ ಆಸ್ಕರ್ ಫರ್ನಾಂಡಿಸ್ ಪ್ರೇರಣೆಯಾಗಿದ್ದು, ಬಂಗಾರಪ್ಪ ಅವರ ಅನುಯಾಯಿಯಾಗಿದ್ದರು.