ಬೆಂಗಳೂರು: ವಿಧಾನಸಭೆ ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ವಿಧಾನಸಭೆ ನೂತನ ಸ್ಪೀಕರ್ ಆಗಿ ಯು.ಟಿ.ಖಾದರ್ ಆಯ್ಕೆನೂತನ ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್ಗೆ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು. ಕರ್ನಾಟಕದಲ್ಲಿ ವಿಧಾನಸಭೆಯ ಸ್ಪೀಕರ್ ಹುದ್ದೆಗೆ ಸೇವೆ ಸಲ್ಲಿಸುವ ಮೊದಲ ಮುಸ್ಲಿಂ ನಾಯಕರಾಗಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಮಾತನಾಡಿ, ವಿಪಕ್ಷ ಉಪನಾಯಕರಾಗಿಯೂ ಯು.ಟಿ.ಖಾದರ್ ಉತ್ತಮ ಕೆಲಸ ಮಾಡಿದ್ದಾರೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು. ನಾಡಿನ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಹಿತರಕ್ಷಣೆ ಆಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪೀಕರ್ ಸ್ಥಾನ ಅತ್ಯುನ್ನತವಾದುದು ಎಂದು ಹೇಳಿದರು.
ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ ಮತ್ತು ಎಚ್.ಕೆ.ಪಾಟೀಲ್ ಅವರ ಹೆಸರುಗಳು ಚರ್ಚೆಗೆ ಬಂದಿದ್ದು, ಇಬ್ಬರೂ ಉದ್ಯೋಗದಲ್ಲಿ ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ.
ಮಾಜಿ ಸಿಎಂ ಬೊಮ್ಮಾಯಿ ಮಾತನಾಡಿ, ಇನ್ನೂ ಯು.ಟಿ.ಖಾದರ್ ಶಾಸಕರಾಗಿ, ಸಚಿವರಾಗಿ ಕೆಲಸ ಮಾಡಿದ್ದಾರೆ. ಯು.ಟಿ.ಖಾದರ್ ವಿಪಕ್ಷ ಉಪನಾಯಕರಾಗಿಯೂ ಉತ್ತಮ ಕೆಲಸ ಮಾಡಿದ್ದಾರೆ. ಈ ಹಿಂದೆ ಸ್ಪೀಕರ್ಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ನ್ಯಾಯಾಂಗಕ್ಕಿಂತ ಎತ್ತರವಾದದ್ದು ಸ್ಪೀಕರ್ ಸ್ಥಾನ. ನಿಷ್ಪಕ್ಷಪಾತವಾಗಿ ತಾವು ಸದನವನ್ನು ನಡೆಸಬೇಕು. ಎಲ್ಲರನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಶಕ್ತಿ ನಿಮ್ಮಲ್ಲಿದೆ ಎಂದು ತಿಳಿಸಿದರು.