Saturday, June 10, 2023
spot_img
- Advertisement -spot_img

ಸಾವರ್ಕರ್‌ರನ್ನುಅವಮಾನಿಸಿದರೆ ಸಹಿಸುವುದಿಲ್ಲ:ಉದ್ಧವ್ ಠಾಕ್ರೆ

ಮಲೇಗಾಂವ್ : ಸಾವರ್ಕರ್‌ ನಮ್ಮ ಆರಾಧ್ಯ ದೈವ, ಅವರನ್ನು ಅವಮಾನಿಸಿದರೆ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.

ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್‌ ಗಾಂಧಿ, ‘ನನ್ನ ಹೆಸರು ಸಾವರ್ಕರ್‌ ಅಲ್ಲ. ನನ್ನ ಗೆಸರು ಗಾಂಧಿ, ಗಾಂಧಿ ಕ್ಷಮೆ ಕೇಳುವುದಿಲ್ಲ‘ ಎಂದು ಹೇಳಿದ್ದರು. ಸಾವರ್ಕರ್‌ಗೆ ಅವಮಾನ ಮಾಡುವುದರಿಂದ ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಬಿಕ್ಕಟ್ಟು ಉಂಟಾಗಬಹುದು ಎಂದು ಹೇಳಿದರು.

ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕಾಗಿದೆ. ಆದರೆ, ಸಾವರ್ಕರ್ ಅವರ ಅವಮಾನವನ್ನು ಸಹಿಸಲಾಗುವುದಿಲ್ಲ. ಸಾವರ್ಕರ್ ಅವರು 14 ವರ್ಷಗಳ ಕಾಲ ಅಂಡಮಾನ್ ಸೆಲ್ಯುಲಾರ್ ಜೈಲಿನಲ್ಲಿ ಊಹಿಸಲಾಗದ ಚಿತ್ರಹಿಂಸೆಯನ್ನು ಅನುಭವಿಸಿದರು. ಅವರ ನೋವುಗಳನ್ನು ನಾವು ಓದಬಹುದು. ಆದರೆ, ಇದು ತ್ಯಾಗದ ರೂಪವಾಗಿದೆ ಎಂದು ತಿಳಿಸಿದರು.

ಪ್ರಧಾನಿ ನನ್ನ ಮುಂದಿನ ಭಾಷಣಕ್ಕೆ ಹೆದರಿದ್ದರಿಂದ ನನ್ನನ್ನು ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ ಎಂದರು.

ರಾಹುಲ್ ಕ್ಷಮೆಯಾಚನೆ ಮಾಡಬೇಕು ಎಂಬ ಕರೆಗೆ ಪ್ರತಿಕ್ರಿಯಿಸಿ, ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ, ನಾನು ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದರು.

Related Articles

- Advertisement -spot_img

Latest Articles