Thursday, September 28, 2023
spot_img
- Advertisement -spot_img

ಜಿ-20 ಶೃಂಗಸಭೆ: ಭಾರತಕ್ಕೆ ಬಂದಿಳಿದ ರಿಷಿ ಸುನಕ್!

ನವದೆಹಲಿ: ಯುಕೆ (ಬ್ರಿಟನ್) ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ರಿಷಿ ಸುನಕ್ ಭಾರತಕ್ಕೆ ಭೇಟಿ ನೀಡಿದ್ದಾರೆ. ಜಿ-20 ಶೃಂಗಸಭೆಯಲ್ಲಿ ಭಾಗಿಯಾಗುವ ಹಿನ್ನೆಲೆ ಇಂದು ದೆಹಲಿಗೆ ಬಂದಿಳಿದಿದ್ದಾರೆ. ರಿಷಿ ಸುನಕ್ ಜೊತೆ ಅವರ ಪತ್ನಿ, ಅಕ್ಷತಾ ಮೂರ್ತಿ ಕೂಡ ಆಗಮಿಸಿದ್ದು, ಅವರನ್ನು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರು ಸ್ವಾಗತಿಸಿದ್ದಾರೆ.

ಬಳಿಕ ಪ್ರತಿಕ್ರಿಯಿಸಿದ ಅವರು, ನಾನು ಹಿಂದೂ ಎಂದು ಹೆಮ್ಮೆಪಡುತ್ತೇನೆ. ನಾನು ಭಾರತಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಲು ಯೋಚಿಸಿದ್ದೇನೆ. ಇತ್ತೀಚೆಗೆ ರಕ್ಷಾ ಬಂಧನವನ್ನು ಸಹ ನಾವು ಆಚರಿಸಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಚಿವರ ಮೇಲೆ ಅರಿಶಿನ ಪುಡಿ ಎರಚಿ ಹೈಡ್ರಾಮಾ!

ಭಾರತ ಮತ್ತು ಯುಕೆ ನಡುವೆ ವ್ಯಾಪಾರ ಒಪ್ಪಂದವನ್ನು ಪಡೆಯಲು ನಾವು ಒಟ್ಟಾಗಿ ತುಂಬಾ ಶ್ರಮಿಸುತ್ತಿದ್ದೇವೆ. ಈ ರೀತಿಯ ವೇದಿಕೆಗಳಲ್ಲಿ, ಜಿ20 ಭಾರತಕ್ಕೆ ಉತ್ತಮ ಯಶಸ್ಸನ್ನು ಖಚಿತಪಡಿಸಿಕೊಳ್ಳಲು ನಾನು ಪ್ರಧಾನಿ ಮೋದಿಯವರೊಂದಿಗೆ ಚರ್ಚಿಸುತ್ತೇನೆ ಎಂದಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles