ಹೈದರಾಬಾದ್: ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಕಾರಣ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ಪಕ್ಷಗಳ ಪ್ರಮುಖ ನಾಯಕರು ಈ ತಿಂಗಳಲ್ಲಿ ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ.
ತೆಲಂಗಾಣದ ಖಮ್ಮಂನಲ್ಲಿ ಇದೇ 27ರಂದು ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗವಹಿಸಲಿದ್ದು, ಜನರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಜಿ.ಕಿಶನ್ ರೆಡ್ಡಿ ಅವರು ಈಗಾಗಲೇ ಖಮ್ಮಂನಲ್ಲಿರುವ ಮೈದಾನವನ್ನು ಪರಿಶೀಲಿಸಿದ್ದು, ಇಲ್ಲಿಯೇ ಅಮಿತ್ ಶಾ ಅವರು ಭಾಷಣ ಮಾಡಲಿದ್ದಾರೆ. ಅಮಿತ್ ಶಾ ಅವರು ಜೂನ್ ತಿಂಗಳಿನಲ್ಲೇ ಖಮ್ಮಂನಲ್ಲಿ ರ್‍ಯಾಲಿ ನಡೆಸಬೇಕಾಗಿತ್ತು. ಆದರೆ, ಹವಾಮಾನ ವೈಪರೀತ್ಯದ ಕಾರಣದಿಂದ ರ್‍ಯಾಲಿಯನ್ನು ಮುಂದೂಡಲಾಗಿತ್ತು.
ಇದನ್ನೂ ಓದಿ: ಅಮಿತಾಭ್ ಕ್ಲಿಕ್ಕಿಸಿದ್ದ ತಂದೆಯ ಸ್ಪೆಷಲ್ ಫೋಟೋ ಹಂಚಿಕೊಂಡ ಪ್ರಿಯಾಂಕಾ
ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇದೇ 26ರಂದು ಚೆವೆಲ್ಲಾದಲ್ಲಿ ನಡೆಯಲಿರುವ ಸಾರ್ವಜನಿಕ ಭಾಷಣದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಪಕ್ಷದ ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಪಂಗಡದ ಘೋಷಣಾ ಪಟ್ಟಿ ಬಿಡುಗಡೆ ಮಾಡಲಿದ್ದಾರೆ’ ಎಂದು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಮಹೇಶ್ ಕೊನಾಗಲ ಹೇಳಿದ್ದಾರೆ.
ಒಟ್ಟಾರೆ ತೆಲಂಗಾಣದಲ್ಲಿ ಕೆಸಿಆರ್ ಸಾಮ್ರಾಜ್ಯವನ್ನು ಅಲುಗಾಡಿಸಲು ಉಭಯ ಪಕ್ಷಗಳು ಕಸರತ್ತು ನಡೆಸುತ್ತಿವೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.