ನವದೆಹಲಿ: ಚಂದ್ರಯಾನ ಯಶಸ್ವಿಯಾಗಿರುವ ಬೆನ್ನಲ್ಲೇ ಇದೀಗ ಮತ್ತೊಂದು ಮಹತ್ವಾಕಾಂಕ್ಷೆಯ ಯೋಜನೆಗೆ ಕೇಂದ್ರ ಸರ್ಕಾರ ಸಜ್ಜಾಗಿದೆ. ಶೀಘ್ರದಲ್ಲೇ ಗಗನಯಾನ್ ಮಿಷನ್ ಆರಂಭಗೊಳ್ಳಲಿದ್ದು, ಮೊದಲಿಗೆ ವ್ಯೋಮ್ಮಿತ್ರ ಎನ್ನುವ ಮಹಿಳಾ ರೋಬೋ ಅನ್ನೂ ಕಳುಹಿಸಲಿದ್ದೇವೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದರು.
ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಾಯೋಗಿಕ ಗಗನಯಾನ ಬಾಹ್ಯಾಕಾಶ ಹಾರಾಟವನ್ನು ಪ್ರಯತ್ನಿಸಲಾಗುವುದು. ನಂತರದ ಕಾರ್ಯಾಚರಣೆಯಲ್ಲಿ ಮಹಿಳಾ ರೋಬೋಟ್ “ವ್ಯೋಮ್ಮಿತ್ರ” ಅನ್ನು ಬಾಹ್ಯಾಕಾಶಕ್ಕೆ ಕಳುಹಿಸಲಾಗುವುದು ಎಂದರು.
ಸಾಂಕ್ರಾಮಿಕ ರೋಗದಿಂದಾಗಿ ಗಗನ್‌ಯಾನ್ ಯೋಜನೆಯು ವಿಳಂಬವಾಗಿದೆ. ಈಗ ನಾವು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಮೊದಲ ಪ್ರಾಯೋಗಿಕ ಕಾರ್ಯಾಚರಣೆಯನ್ನು ಯೋಜಿಸುತ್ತಿದ್ದೇವೆ. ಗಗನಯಾತ್ರಿಗಳನ್ನು ಮರಳಿ ಕರೆತರುವುದು ಅವರನ್ನು ಕಳುಹಿಸುವಷ್ಟೇ ಮುಖ್ಯವಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.
ಇದನ್ನೂ ಓದಿ: ಮಾಜಿ ಸಿಎಂ ಹೆಚ್‌ಡಿಕೆ ಫೇಸ್‌ಬುಕ್ ಅಕೌಂಟ್ ಹ್ಯಾಕ್!
ಎರಡನೇ ಕಾರ್ಯಾಚರಣೆಯಲ್ಲಿ, ಮಹಿಳಾ ರೋಬೋಟ್ ಗಗನಯಾನಕ್ಕೆ ತೆರಳಲಿದ್ದಾರೆ. ಅದು ಎಲ್ಲಾ ಮಾನವ ಚಟುವಟಿಕೆಗಳನ್ನು ಅನುಕರಿಸಲಿದ್ದು, ಎಲ್ಲವೂ ಪರಿಪೂರ್ಣವಾಗಿದ್ದರೆ, ನಾವು ಮುಂದುವರಿಯಬಹುದು ಎಂದು ಸಚಿವರು ಹೇಳಿದರು.
ಮಾನವಸಹಿತ ಗಗನಯಾನಕ್ಕೆ ಸಿದ್ಧವಾಗುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.
ಏನಿದು ಮಾನವ ಸಹಿತ ಗಗನಯಾನ್ ಯೋಜನೆ?
ಗಗನಯಾನ್ ದೇಶದ ಅತ್ಯಂತ ಮುಖ್ಯವಾದ ಬಾಹ್ಯಾಕಾಶ ಯೋಜನೆಯಾಗಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈ ಯೋಜನೆಯ ನೇತೃತ್ವ ವಹಿಸಿದೆ. ಗಗನಯಾನ್ನಲ್ಲಿ ಗಗನಯಾತ್ರಿಗಳು ಬಾಹ್ಯಾಕಾಶಕ್ಕೆ ತೆರಳಲಿದ್ದು, 400 ಕಿಲೋಮೀಟರ್ ಎತ್ತರದ ಕಕ್ಷೆಯಲ್ಲಿ ಮೂರು ದಿನಗಳ ಕಾಲ ಇರಲಿದ್ದಾರೆ ಎನ್ನಲಾಗಿದೆ. ಆದರೆ, ಎಷ್ಟು ಮಂದಿ ಗಗನಯಾತ್ರಿಗಳು ಬಾಹ್ಯಾಕಾಶಕ್ಕೆ ತೆರಳಲಿದ್ದಾರೆ ಎಂಬುದನ್ನು ಅಧಿಕೃತವಾಗಿ ಸರ್ಕಾರ ಇನ್ನೂ ತಿಳಿಸಿಲ್ಲ. ಯೋಜನೆಗೆ 2018ರಲ್ಲಿ 10 ಸಾವಿರ ಕೋಟಿ ರೂಪಾಯಿಗಳ ಬಜೆಟ್‌ನೊಂದಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.