ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.
ಬೊಮ್ಮಾಯಿ ಅವರು ಕಳೆದ ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಹಿನ್ನೆಲೆ ವಿಶ್ರಾಂತಿ ಪಡೆಯುತ್ತಿರುವ ಅವರನ್ನು ನಿರ್ಮಲಾ ಸೀತಾರಾಮನ್ ಭೇಟಿಯಾಗಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ, ಇಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ನನ್ನ ಸ್ವಗೃಹಕ್ಕೆ ಆಗಮಿಸಿ, ನನ್ನ ಆರೋಗ್ಯವನ್ನು ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದರು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.


ನಿರ್ಮಲಾ ಸೀತಾರಾಮನ್ ಅವರೊಂದಿಗೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಗೌತಮ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಉಸ್ಥಿತರಿದ್ದರು.
ಮಂಡಿ ನೋವಿನಿಂದ ಬಳಲುತ್ತಿದ್ದ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರ ಸಲಹೆ ಮೇರೆಗೆ ಬೊಮ್ಮಾಯಿ ಅವರನ್ನು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಇದನ್ನೂ ಓದಿ: ನಾಲ್ಕು ನಗರಗಳಲ್ಲಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಇಳಿಕೆ!
ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಸಿಎಂ ಆಗಿದ್ದ ವೇಳೆ ರಾಜ್ಯಾದ್ಯಂತ ಸಾಕಷ್ಟು ಓಡಾಟ ನಡೆಸಿದ್ದರು. ಆಗ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿತ್ತು. ಇದಕ್ಕೆ ನಾಟಿ ವೈದ್ಯರಿಂದ ಚಿಕಿತ್ಸೆ ಪಡೆದಿದ್ದರೂ ನೋವು ಕಡಿಮೆಯಾಗಿರಲಿಲ್ಲ. ಹಾಗಾಗಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.