ರಾಜಸ್ಥಾನ: ಚಂದ್ರಯಾನ ನೌಕೆ ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ಆದರೆ ರಾಹುಲ್‌ಯಾನ ಮೇಲಕ್ಕೆ ಹಾರಲೂ ಇಲ್ಲ, ಕೆಳಕ್ಕೆ ಇಳಿಯಲೂ ಇಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೇವಡಿ ಮಾಡಿದರು.
ಜೈಸಲ್ಮೇರ್‌ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ರಾಜನಾಥ್ ಸಿಂಗ್, ಸನಾತನ ಧರ್ಮ ಕುರಿತ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.
‘ಡಿಎಂಕೆ ನಾಯಕ ಸನಾತನ ಧರ್ಮಕ್ಕೆ ಅವಮಾನ ಮಾಡಿದರೂ ಕಾಂಗ್ರೆಸ್ ನಾಯಕರು ಮಾತನಾಡುತ್ತಿಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೂ ಈ ವಿಷಯದಲ್ಲಿ ಮೌನವಹಿಸಿರುವುದೇಕೆ? ಸನಾತನ ಧರ್ಮದ ಬಗ್ಗೆ ಅವರ ಅಭಿಪ್ರಾಯ ಕೇಳಬಯಸುತ್ತೇನೆ’ ಎಂದು ಗುಡುಗಿದರು.
ಇದನ್ನೂ ಓದಿ: ರಾಹುಲ್‌ಗಾಗಿ ಸ್ಪೆಷಲ್ ʼಮಟನ್ʼ ರೆಸಿಪಿ ಮಾಡಿದ ಲಾಲು!
‘ಸನಾತನ ಧರ್ಮವು ಜಗತ್ತನ್ನು ಒಂದು ಕುಟುಂಬವೆಂದು ಪರಿಗಣಿಸುತ್ತದೆ. ‘ಇಂಡಿಯಾ’ ಮೈತ್ರಿಕೂಟದ ಪ್ರತಿಯೊಬ್ಬ ಸದಸ್ಯರೂ ಈ ಬಗ್ಗೆ ಕ್ಷಮೆ ಕೇಳಬೇಕು. ಇಲ್ಲವಾದರೆ ಈ ದೇಶ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.