ಮಂಡ್ಯ : ಉರಿಗೌಡ-ನಂಜೇಗೌಡ ಸಿನಿಮಾ ನಾನು ಮಾಡಲ್ಲ ಎಂದು ಸಚಿವ ಮುನಿರತ್ನ ತಿಳಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿ, ವೃಷಭ ಪ್ರೊಡಕ್ಷನ್‌ನಲ್ಲಿ ಮೇ 14ರಂದು ಚಿತ್ರೀಕರಣದ ಮುಹೂರ್ತ ಮಾಡಬೇಕು ಅಂತಾ ಪ್ಲಾನ್ ಮಾಡಿದ್ದೆ , ಜೊತೆಗೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಜೊತೆಗೆ ಚರ್ಚಿಸಿದ ನಂತರ ನಿರ್ಧಾರ ಕೈ ಬಿಟ್ಟಿದ್ದೇನೆ ಎಂದು ಹೇಳಿದರು.
ಉರಿಗೌಡ-ನಂಜೇಗೌಡ ವಿಚಾರದಲ್ಲಿ ಸ್ವಾಮೀಜಿ ಜೊತೆ ಚರ್ಚೆ ಮಾಡಿದೆ. ಆಗ ನನಗೆ ಅನ್ನಿಸಿತು, ಯಾರಿಗೂ ಮನಸ್ಸು ನೋಯಿಸಬಾರದು. ಸಿನಿಮಾ ಮಾಡಲು ಕಥೆಗಳು ತುಂಬಾ ಸಿಗುತ್ತದೆ. ಸ್ವಾಮೀಜಿ ಅವರಿಗೆ ಹೇಳಿದ್ದೇನೆ. ಯಾರ ಮನಸ್ಸು ನೋಯಿಸುವ ಉದ್ದೇಶ ನನ್ನದಲ್ಲ. ನಾನು ಈ ಸಿನಿಮಾವನ್ನು ಇಲ್ಲಿಗೆ ಕೈ ಬಿಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಶ್ರೀಗಳು ನೈಜತೆ ಇದ್ದರೆ ಅದರ ಬಗ್ಗೆ ಯೋಜನೆ ಮಾಡಿ, ಗೊಂದಲ ಇರುವಾಗ ಯಾವುದು ಸೂಕ್ತ ಎಂದು ಕೇಳಿದರು. ಶ್ರೀಗಳ ಮಾತಿನಂತೆ ನಾನು ಸಿನಿಮಾ ಮಾಡಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಉರಿಗೌಡ, ದೊಡ್ಡ ನಂಜೇಗೌಡ ಬಗ್ಗೆ ಸಂಶೋಧನೆ ನಡೆಯುತ್ತಿದೆ.ಸಚಿವ ಮುನಿರತ್ನ ಟೈಟಲ್ ರಿಜಿಸ್ಟರ್ಗೆ ಅರ್ಜಿ ಹಾಕಿದ್ದರು. ಅಲ್ಲದೇ ಸಿನಿಮಾದ ಮುಹೂರ್ತ ದಿನಾಂಕವನ್ನೂ ಘೋಷಿಸಿಬಿಟ್ಟಿದ್ದರು.
ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ಮುನಿರತ್ನ, ಮೇ 18 ರಂದು ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತ ಮಾಡಲಾಗುವುದು ಎಂದಿದ್ದರು. ಈ ವಿಚಾರವಾಗಿ ಆಕ್ಷೇಪ ವ್ಯಕ್ತವಾಗಿದ್ದಲ್ಲದೇ, ಭಾರತೀಯ ಒಕ್ಕಲಿಗ ಯುವಬ್ರಿಗೆಡ್ ಇದಕ್ಕೆ ಅನುಮತಿ ನೀಡಬಾರದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿತ್ತು.