ವಾಷಿಂಗ್ಟನ್: ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಶ್ವೇತಭವನ ತಿಳಿಸಿದೆ. ಆದರೆ ಅಧ್ಯಕ್ಷ ಜೊ ಬೈಡನ್ ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ.
72 ವರ್ಷದ ಜಿಲ್ ಬೈಡನ್ ಅವರಿಗೆ ಕೋವಿಡ್ ನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ರೆಹೋಬೋತ್ ಬೀಚ್‌ನಲ್ಲಿರುವ ಅವರ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ ಎಂದು ಶ್ವೇತಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ : ಇಂದು 6 ರಾಜ್ಯಗಳ 7 ಸ್ಥಾನಗಳಿಗೆ ಉಪಚುನಾವಣೆಗೆ ಮತದಾನ, ಇದು ಇಂಡಿಯಾ ಒಕ್ಕೂಟಕ್ಕೆ ಮೊದಲ ಪರೀಕ್ಷೆ!
ಜಿಲ್ ಬೈಡನ್ ಅವರಿಗೆ 2022ರ ಆಗಸ್ಟ್ ನಲ್ಲಿ ಕೂಡ ಕೋವಿಡ್ ಲಕ್ಷಣ ಕಾಣಿಸಿಕೊಂಡಿತ್ತು. ಜೊ ಬೈಡನ್ ಅವರಿಗೆ ಸಹ ಕಳೆದ ವರ್ಷ ಜುಲೈ 2022ರಲ್ಲಿ ಕೋವಿಡ್ ಪಾಸಿಟಿವ್ ಬಂದಿತ್ತು.
ಈ ವಾರ ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯಲಿದ್ದು ಅದರಲ್ಲಿ ಜೊ ಬೈಡನ್ ಅವರು ಸಹ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 7ರಂದು ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಸೆಪ್ಟೆಂಬರ್ 8ರಂದು ಶೃಂಗಸಭೆಯ ಹೊರಗೆ ಪ್ರಧಾನಿ ಮೋದಿಯವರ ಜೊತೆ ಪ್ರತ್ಯೇಕ ಮಾತುಕತೆ ನಡೆಸಲಿದ್ದಾರೆ.
ಇದನ್ನೂ ಓದಿ : ವಕ್ಫ್ ಕಾಯ್ದೆ ರದ್ದುಗೊಳಿಸಿ, ಪಿಎಂ ಮೋದಿಗೆ ಪತ್ರ ಬರೆದ ಶಾಸಕ ಯತ್ನಾಳ್
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.