ಲಖನೌ : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಸರ್ಕಾರದ ಸ್ಥಿರತೆಯೊಂದಿಗೆ ಅಭಿವೃದ್ದಿಗೆ ವೇಗ ನೀಡುವ ಅಗತ್ಯವಿದೆ. ರಾಜಕೀಯ ಭದ್ರತೆಯೂ ಬೇಕು ಹೀಗಾಗಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಇದು ಕೇಂದ್ರ ಸರ್ಕಾರದ ಈ ಪ್ರಶಂಸನೀಯ ನಿಲುವಿನ ಅಗತ್ಯವಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಒಂದು ರಾಷ್ಟ್ರ, ಒಂದು ಚುನಾವಣೆಗಾಗಿ ನಮ್ಮ ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚಿಸಿರುವುದು ನನಗೆ ಮತ್ತಷ್ಟು ಸಂತಸ ನೀಡಿದೆ. ಈ ನೂತನ ಕಾರ್ಯವನ್ನು ಮಾಡಲು ಮುಂದಾಗಿರುವ ಪ್ರಧಾನಿ ಮೋದಿಯವರಿಗೆ ಉತ್ತರ ಪ್ರದೇಶದ ಜನತೆಯ ಪರವಾಗಿ ನಾನು ಹೃದಯ ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ಇದನ್ನೂ ಓದಿ : ಲೋಕಸಮರಕ್ಕೆ ಸಿದ್ಧತೆ : ಪ್ರಚಾರ ಸಮಿತಿ ಸಭೆ ಕರೆದ ಕಾಂಗ್ರೆಸ್
ದೇಶದಲ್ಲಿ ಪದೇ ಪದೇ ಚುನಾವಣೆಗಳು ನಡೆಯುವುದರಿಂದ ಅಭಿವೃದ್ದಿಗೆ ಹಿನ್ನಡೆ ಉಂಟಾಗುತ್ತದೆ. ಆ ಸಮಯದಲ್ಲಿ ಒಂದೂವರೆ-ಎರಡು ತಿಂಗಳ ವರೆಗೆ ಅಭಿವೃದ್ದಿಗೆ ಅಡಚಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಲೋಕಸಭಾ, ವಿಧಾನಸಭಾ ಸೇರಿದಂತೆ ಎಲ್ಲ ಚುನಾವಣೆಗಳನ್ನು ಏಕ ಕಾಲದಲ್ಲಿ ನಡೆಸುವುದು ಅಭಿವೃದ್ದಿಗೆ ವೇಗ ನೀಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಪ್ರಜಾಪ್ರಭುತ್ವದ ಏಳಿಗೆ ಮತ್ತು ಪ್ರಜಾಪ್ರಭುತ್ವದ ಸ್ಥಿರತೆಗೆ ನಾನು ಈ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಕೇಂದ್ರ ಸರ್ಕಾರವು ‘ಒಂದು ರಾಷ್ಟ್ರ, ಒಂದು ಚುನಾವಣೆ’ಯ ಬಗ್ಗೆ ರಚಿಸಿರುವ ಅಧ್ಯಯನ ಸಮಿತಿ ರಚಿಸಿದ್ದು, ಇದು ಸಾರ್ವತ್ರಿಕ ಚುನಾವಣೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಯೋಜಿಸಿದೆ ಎಂದು ಸಿಎಂ ಯೋಗಿ ಅಭಿಪ್ರಾಯಪಟ್ಟರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.