Wednesday, March 22, 2023
spot_img
- Advertisement -spot_img

ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ರಚನೆ: ಅಧ್ಯಕ್ಷರಾಗಿ ಸಿಎಂ ಬೊಮ್ಮಾಯಿ ನೇಮಕ

ಬೆಂಗಳೂರು: ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಘೋಷಣೆಯಾಗಿದ್ದು, 25 ಸದಸ್ಯರ ತಂಡವನ್ನು ರಚನೆ ಮಾಡಲಾಗಿದೆ. ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಲಾಗಿದೆ.

ರಮೇಶ್‌ ಜಾರಕಿಹೊಳಿಗೆ ಅವಕಾಶ ನೀಡಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೂಚನೆಯ ಮೇರೆಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಹಾಗೂ ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌ ಸಮಿತಿಗಳನ್ನು ರಚನೆ ಮಾಡಿದ್ದಾರೆ. ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿ 25 ಸದಸ್ಯರು ನೇಮಕ ಮಾಡಿದ್ದು, ಸದಸ್ಯ ಸ್ಥಾನಕ್ಕೆ ಬಿವೈ ವಿಜಯೇಂದ್ರ ಅವರಿಗೂ ಅವಕಾಶ ನೀಡಲಾಗಿದೆ.

ಚುನಾವಣಾ ನಿರ್ವಹಣಾ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕಗೊಂಡಿದ್ದಾರೆ. ಚುನಾವಣಾ ನಿರ್ವಹಣಾ ಸಮಿತಿಯಲ್ಲಿ ಶೋಭಾ ಕರಂದ್ಲಾಜೆ ಸೇರಿದಂತೆ 14 ಮಂದಿಯನ್ನು ನೇಮಕ ಮಾಡಲಾಗಿದೆ. ಅಂದಹಾಗೆ ಶಾಸಕ ಹಾಗೂ ವಸತಿ ಸಚಿವ ಸೋಮಣ್ಣ ಹೆಸರನ್ನು ಹಾಕಿಲ್ಲ, ನಾನು ನಿಂತ ನೀರಲ್ಲ. ಹರಿಯೋ ನೀರು, ಮನೆ ಮಗನಾಗಿ ಕ್ಷೇತ್ರದ ಜನರು ನೋಡಿದ್ದಾರೆ ಎಂದರು

ನಾನು ಯಾರ ಬಗ್ಗೆಯೂ ಒಂದು ಅಕ್ಷರವೂ ಮಾತನಾಡಿಲ್ಲ. ರಾಜ್ಯಾಧ್ಯಕ್ಷರು, ಸಿಎಂ ಜೊತೆ ಕೆಲವು ವಿಷಯಗಳ ಬಗ್ಗೆ ಮಾತಾಡಿದ್ದೇನೆ. ಪ್ರಚಾರ ಸಮಿತಿಯಲ್ಲಿ ಅವಕಾಶ ನೀಡದೇ ಇರೋದಕ್ಕೆ ನಾನು ಏನು ಈ ಬಗ್ಗೆ ಮಾತಾಡೋದಿಲ್ಲ ಎಂದು ಹೇಳಿದ್ದಾರೆ.

Related Articles

- Advertisement -

Latest Articles