ಚಾಮರಾಜನಗರ : ನನ್ನ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಮಾಜಿ ಸಚಿವ ವಿ ಸೋಮಣ್ಣ ಆರೋಪಿಸಿದ್ದಾರೆ.
ಚಾಮರಾಜನಗರದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನನ್ನ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ, ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ. ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡಿಬೇಕು, ಕೆಲವರು ಮಾತ್ರ ಇಂತಹ ಪಾಪದ ಕೆಲಸ ಮಾಡಿದ್ದಾರೆ. 7ರಿಂದ 8 ಜನರಿಂದ ನನಗೆ ಸೋಲುಂಟಾಯಿತು ಎಂದು ಭಾವುಕರಾದರು.
ಮಾದೇಶ್ವರನ ಆಣೆ. ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ. ಹೈಕಮಾಂಡ್ ಹೇಳಿದ್ದರಿಂದ ಚಿನ್ನದಂತಹ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಇಲ್ಲಿಗೆ ಚಾಮರಾಜನಗರಕ್ಕೆ ಬಂದೆ. ಪಕ್ಷವನ್ನು ತಾಯಿಗೆ ಸಮಾನ ಎಂದು ಹೇಳುತ್ತೇವೆ. ಪಕ್ಷ ಒಳಗೇ ಇದ್ದು ದ್ರೋಹ ಬಗೆಯುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಬೊಮ್ಮಾಯಿ, ಸೋಮಣ್ಣ ಅವರು ನಮ್ಮ ಹಿರಿಯ ನಾಯಕರು. ಪಕ್ಷದ ಇಚ್ಛೆಯಂತೆ ಚಾಮರಾಜನಗರ ಮತ್ತು ವರುಣಾದಲ್ಲಿ ಸ್ಫರ್ಧಿಸಿ ಸೋತಿದ್ದಾರೆ. ಮುಂದೆ ಒಳ್ಳೆಯ ಅವಕಾಶಗಳು ಅವರಿಗೆ ಸಿಗುತ್ತದೆ. ವರಿಷ್ಠರು ಕೂಡಾ ಸೋಮಣ್ಣ ಅವರ ಜೊತೆ ಮಾತನಾಡಿದ್ದಾರೆ ಎಂದು ತಿಳಿಸಿದರು. ನಾನು ಯಾವುದೇ ಅವಕಾಶಗಳನ್ನು ನಿರೀಕ್ಷೆ ಮಾಡಿದವನಲ್ಲ. ಪಕ್ಷ ಏನು ಹೇಳಿದೆಯೋ ಅದನ್ನು ಮಾಡಿದ್ದೇನೆ ಎಂದು ಹೇಳಿದ್ದರು.