ಬೆಂಗಳೂರು : ಕರ್ನಾಟಕ ವಿಧಾನ ಸಭೆ ಚುನಾವಣೆಯ ಫಲಿತಾಂಶ ಹೊರ ಬೀಳ್ತಿದ್ದು ಹಲವು ಘಟಾನುಘಟಿ ನಾಯಕರು ಹಿನ್ನಡೆ, ಮುನ್ನಡೆ ಸಾಧಿಸುತ್ತಿದ್ದಾರೆ. ಭಾರೀ ಕುತೂಹಲ ಕೆರಳಿಸಿದ್ದ ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದಕೊಂಡಿದ್ದು, ಇಲ್ಲಿ ಬಿಜೆಪಿಯ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಹಿನ್ನಡೆ ಅನುಭವಿಸುತ್ತಿದ್ದಾರೆ.
ಸಿದ್ದರಾಮಯ್ಯ ಸ್ಪರ್ಧೆಯಿಂದ ಮೈಸೂರಿನ ವರುಣಾ ಕ್ಷೇತ್ರ ಹೆಚ್ಚಿನ ಗಮನ ಸೆಳೆದಿತ್ತು. ಸಚಿವ ವಿ.ಸೋಮಣ್ಣಗೆ ಚಾಮರಾಜನಗರ ಕ್ಷೇತ್ರದಲ್ಲಿಯೂ ಸಹ ಹಿನ್ನಡೆಯಾಗಿದೆ, ಬಿಜೆಪಿಯ ವಿ ಸೋಮಣ್ಣ ಹಿನ್ನಡೆಯಲ್ಲಿದ್ದಾರೆ, ಕನಕಪುರ ಕ್ಷೇತ್ರದಲ್ಲಿ ಶಿವಕುಮಾರ್ ಮುನ್ನಡೆ ಸಾಧಿಸಿದ್ದರೆ ಬಿಜೆಪಿ ಯ ಆರ್ ಅಶೋಕ್ ಹಿನ್ನಡೆ ಕಂಡಿದ್ದಾರೆ. ಸೋಮಣ್ಣ ಸಿದ್ದರಾಮಯ್ಯ ವಿರುದ್ಧ ವರುಣಾ ಜೊತೆಗೆ ಚಾಮರಾಜನಗರದಲ್ಲಿಯೂ ಸ್ಪರ್ಧಿಸಿದ್ದಾರೆ.
ಚನ್ನಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗೆ ಮುನ್ನಡೆ ಸಾಧಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಿನ್ನೆಡೆ ಅನುಭವಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ ಹಿನ್ನೆಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿಗೆ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ 3 ಸಾವಿರ ಮತಗಳ ಅಂತರದಿಂದ ಮುನ್ನಡೆ ಗಳಿಸಿದ್ದಾರೆ.
ಸಚಿವರಾದ ಡಾ.ಕೆ.ಸುಧಾಕರ್, ಸಿ. ಸಿ ಪಾಟೀಲ್. ನಾರಾಯಣಗೌಡ, ಬಿಸಿ ನಾಗೇಶ್, ವಿ. ಸೋಮಣ್ಣ, ಶ್ರೀರಾಮುಲು ಬಿ. ಸಿ ಪಾಟೀಲ್, ಎಂಟಿಬಿ ನಾಗರಾಜ್, ಗೋವಿಂದ ಕಾರಜೋಳ ಹಿನ್ನೆಡೆ ಅನುಭವಿಸಿದ್ದಾರೆ.