ರಾಮನಗರ : ಕುಖ್ಯಾತ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ ಶುಕ್ರವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿರುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಒಡಿಶಾ ರಾಜ್ಯದ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಆಗಮಿಸಿದ ವೇಳೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿದ್ಯಾರಾಣಿ ದೇವರ ಫೋಟೋ ನೀಡಿ ಆಶೀರ್ವಾದ ಪಡೆದರು.
ರಾಜಕೀಯ ಪ್ರವೇಶ ಮಾಡ್ತಾರಾ ವಿದ್ಯಾರಾಣಿ..!
2020ರಲ್ಲಿ ತಮಿಳುನಾಡು ರಾಜಕಾರಣಕ್ಕೆ ಪ್ರವೇಶಿಸಿದ ವಿದ್ಯಾರಾಣಿ ಬಿಜೆಪಿ ಯುವ ಘಟಕದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು. ಆನಂತರ ಬಿಜೆಪಿ ತೊರೆದ ಅವರು, ನಾಮ್ ತಮಿಲರ್ ಕಚ್ಚಿ ಪಕ್ಷ ಸೇರ್ಪಡೆಯಾಗಿದ್ದಾರೆ. ಈಗ ಡಿಕೆಶಿ ತಮ್ಮನ್ನು ಭೇಟಿಯಾದ ವಿದ್ಯಾರಾಣಿ ಅವರೊಂದಿಗೆ ಮಾತುಕತೆ ನಡೆಸಲು ಪ್ರತ್ಯೇಕವಾಗಿ ಅವಕಾಶ ನೀಡುವುದಾಗಿ ಹೇಳಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
