ದೇವನಹಳ್ಳಿ: ದೇವನಹಳ್ಳಿಯ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಹೃದಯಾಘಾತವಾಗಿದೆ. ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಮುಂಜಾನೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈಗ ಚಿಕಿತ್ಸೆ ನಡೆಯುತ್ತಿದೆ. ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ವೆಂಕಟಸ್ವಾಮಿ ಬಿರುಸಿನ ಪ್ರಚಾರ ಮಾಡುತ್ತಿದ್ದರು. ನಿನ್ನೆ ಪ್ರಚಾರ ಮುಗಿಸಿ ಮನೆಗೆ ತೆರಳಿದ್ದರು. ಆಯಾಸದಿಂದ ಹೃದಯಾಘಾತವಾಗಿದೆ ಎನ್ನಲಾಗಿದೆ. ಪ್ರಸ್ತುತ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಣಕ್ಕೆ ತೊಂದರೆಯಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಒಂದು ರೌಂಡ್ ಪ್ರಚಾರ ಮುಗಿಸಿರುವ ವೆಂಕಟಸ್ವಾಮಿ ಎರಡನೆ ಹಂತದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ವೈದ್ಯರು ಯಾವುದೇ ಅಪಾಯವಿಲ್ಲ ಅಂತ ಕುಟುಂಬಸ್ಥರಿಗೆ ತಿಳಿಸಿದ್ದು ಸ್ಟಂಟ್ ಹಾಕಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನೂ ವೆಂಕಟಸ್ವಾಮಿ ಅವರಿಗೆ ಹೃದಯಾಘಾತವಾಗಿರುವ ವಿಚಾರ ತಿಳಿದು ಅವರ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದ್ದು ಕೆಲ ಅಭಿಮಾನಿಗಳು ಆಸ್ವತ್ರೆ ಹಾಗೂ ಮನೆ ಬಳಿ ತೆರಳಿ ಅವರ ಆರೋಗ್ಯ ವಿಚಾರಣೆ ಮಾಡ್ತಿದ್ದಾರೆ.