ಬೆಂಗಳೂರು : ನಾನು ನೀಡಿದ ಲಿಸ್ಟ್ನದ್ದು ಮಾತ್ರ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಯತೀಂದ್ರ ಸಿದ್ದರಾಮಯ್ಯ ಸೂಚಿಸಿರುವ ವಿಡಿಯೋ ವೈರಲ್ ಆಗಿದೆ. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಬಿಜೆಪಿ-ಜೆಡಿಎಸ್ ನಾಯಕರು ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.
ಈ ನಡುವೆ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ಮತ್ತು ಯತೀಂದ್ರ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ವಿಡಿಯೋ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, “ಯತೀಂದ್ರ ಅವರು ಮಾಜಿ ಶಾಸಕರು, ಅವರು ಜನರ ಕೆಲಸ ಮಾಡುವುದರಲ್ಲಿ ತಪ್ಪೇನು? ವಿಡಿಯೋದಲ್ಲಿ ಯಾವ ವಿಚಾರದ ಬಗ್ಗೆ ಅವರು ಹೇಳಿದ್ದಾರೋ ಗೊತ್ತಿಲ್ಲ. ಯಾರು ಆ ವಿಡಿಯೋ ಕಟ್ ಆ್ಯಂಡ್ ಪೇಸ್ಟ್ ಮಾಡಿದ್ದಾರೋ ಗೊತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಕಟ್ ಆ್ಯಂಡ್ ಪೇಸ್ಟ್ ಮಾಡುತ್ತಾರೆ. ಮಾತಾನಾಡಿದ ರೀತಿಯೇ ಬೇರೆ ಇರುತ್ತೆ, ತೋರಿಸುವುದೇ ಬೇರೆ ಇರುತ್ತದೆ. ಯತೀಂದ್ರ ಸಾರ್ವಜನಿಕ ಸೇವೆಯಲ್ಲಿ ಇರೋದು ಅಪರಾಧವಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ : ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್: ಸಿಎಂ ರಾಜೀನಾಮೆಗೆ ಅಗ್ರಹಿಸಿದ ಹೆಚ್‌ಡಿಕೆ
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರು ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ತಾಕೀತು ಮಾಡಿದ ವಿಡಿಯೋ ವೈರಲ್ ಆಗಿದೆ. ಪೋಸ್ಟಿಂಗ್ ವಿಚಾರವಾಗಿ ಸಿಎಂ ಜೊತೆ ಮಾತನಾಡಿರುವ ಯತೀಂದ್ರ ಅವರು, ನಾನು ಹೇಳಿದಷ್ಟು ಮಾತ್ರ ಮಾಡಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಅನೇಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.