Monday, December 11, 2023
spot_img
- Advertisement -spot_img

ಪ್ರತಿ ತಿಂಗಳು ಚಾಮುಂಡೇಶ್ವರಿಗೂ ತಲುಪಲಿದೆ ಗೃಹಲಕ್ಷ್ಮಿ ಯೋಜನೆ ಹಣ

ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳು ನಾಡದೇವತೆ ಚಾಮುಂಡೇಶ್ವರಿಗೆ ನೀಡಿ ಎಂದು ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ಗೆ ಪತ್ರ ಬರೆದಿರುವ ಅವರು,ಗೃಹಲಕ್ಷ್ಮಿ ಯೋಜನೆಗೂ ಮುನ್ನ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ಹರಕೆ ಹೊತ್ತಿದ್ರಿ ನಂತರ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಾಯಿತು. ಯೋಜನೆಯ ಮೊದಲ ಹಣ ತಾಯಿ ಚಾಮುಂಡೇಶ್ವರಿಗೆ ಅರ್ಪಿ ಸಲಾಗಿತ್ತು. ಖುದ್ದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್ ತಾಯಿ ಚಾಮುಂಡೇಶ್ವರಿಗೆ 2 ಸಾವಿರ ಅರ್ಪಿಸಿದ್ದರು.

ಇದನ್ನೂ ಓದಿ: ಮ.ಪ್ರದೇಶ, ಛತ್ತೀಸ್‌ಗಢ ವಿಧಾನಸಭೆ ಚುನಾವಣೆ: ಇಂದು ಮತದಾನ..!

ಪ್ರತಿ ತಿಂಗಳು ತಾಯಿಗೆ ಎರಡು ಸಾವಿರ ನೀಡಿ ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ. ಇದಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಂದಿಸಿದ್ದು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ಅರ್ಪಿಸಲು ಒಪ್ಪಿಗೆ ಸೂಚಿಸಿದ್ದಾರೆ ಜೊತೆಗೆ ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸೂಚಿಸುತ್ತೇನೆ. ಈ ಪತ್ರದ ಬಗ್ಗೆ ತಕ್ಷಣ ಕ್ರಮವಹಿಸಿ ಎಂದು ಡಿಸಿಎಂ ಸಹಿ ಹಾಕಿ ಭರವಸೆ ನೀಡಿದ್ದಾರೆ.

ರಾಜ್ಯದ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತರಲಾಗಿದ್ದು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಗೃಹ ಲಕ್ಷ್ಮಿ ಯೋಜನೆ ನೀಡುವುದಾಗಿ ಪಕ್ಷದ ನಾಯಕರು ಚುನಾವಣೆಗೆ ಮುನ್ನವೇ ಗ್ಯಾರಂಟಿಯಾಗಿ ಘೋಷಿಸಿದ್ದರು. ಈ ಯೋಜನೆಯಡಿ ಮನೆಯ ಯಜಮಾನಿಗೆ 2000 ರೂಪಾಯಿ ಸಹಾಯಧನ ನೀಡಲಾಗುತ್ತಿದೆ..

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles