Tuesday, March 28, 2023
spot_img
- Advertisement -spot_img

ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಗಲಿಕೆ ಭಕ್ತಸಮೂಹಕ್ಕೆ ಆಘಾತ ಉಂಟು ಮಾಡಿದೆ : ನಳೀನ್ ಕುಮಾರ್ ಕಟೀಲ್

ಮಂಗಳೂರು: ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಗಲಿಕೆ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ವಿಜಯಪುರ ಜ್ಞಾನಯೋಗಾಶ್ರಮದ ಜ್ಞಾನ ಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು. ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ದೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ ಆಗಿದ್ದರು.

ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಟಾಂತರಾಗಿದ್ದರು. ಒಬ್ಬ ಜ್ಞಾನಯೋಗಿಗಳ ರೂಪದಲ್ಲಿ ಅವರು ಮುಂದೆಯೂ ನಮ್ಮೊಂದಿಗೆ ಇರುತ್ತಾರೆ ಎಂದು ತಿಳಿಸಿದ್ದಾರೆ.
ವಿಜಯಪುರದ ಜ್ಞಾನಯೋಗಾಶ್ರಮ ಜನತೆಗೆ ಜ್ಞಾನದಾಸೋಹ ನೀಡುವ ವಿಶಿಷ್ಟ ಕೇಂದ್ರವಾಗಿದೆ.

ಪದ್ಮಶ್ರೀ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾನಿಲಯ ಅವರಿಗೆ ಗೌರವ ಡಾಕ್ಟರೇಟ್ ಅನ್ನು ನಯವಾಗಿಯೇ ನಿರಾಕರಿಸಿದ್ದು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಕೈಗನ್ನಡಿ ಎಂದು ತಿಳಿಸಿದ್ದಾರೆ.

Related Articles

- Advertisement -

Latest Articles