ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಆಘಾತ ಎದುರಾಗಿದೆ. ಮಾಜಿ ಸಂಸದೆ ಹಾಗೂ ಹಿರಿಯ ನಟಿ ವಿಜಯಶಾಂತಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ನ. 17ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರಲಿಲ್ಲ. ಅವರು ಮೇದಕ್ ಲೋಕಸಭಾ ಕ್ಷೇತ್ರದಿಂದ ಬಿಆರ್‌ಎಸ್ (ಆಗಿನ ಟಿಆರ್‌ಎಸ್) ನಿಂದ ಗೆಲುವು ಪಡೆದಿದ್ದರು.
ಇದನ್ನೂ ಓದಿ: ವಿರಾಟ್ ಕೊಹ್ಲಿ ‘ಸಿಎಂ ಕೆಸಿಆರ್ ನಂತೆ ಎಂದ ಪುತ್ರಿ; ಕುಟುಕಿದ ಕಾಂಗ್ರೆಸ್
ನಂತರ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಕಾಂಗ್ರೆಸ್ ಸೇರಿದ್ದರು. ಬಳಿಕ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 2020ರಲ್ಲಿ ಬಿಜೆಪಿ ಸೇರಿದ್ದರು. ಸದ್ಯ ಅವರೀಗ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಮರಳಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.