ಶಿವಮೊಗ್ಗ : ಗ್ರಾಮ ಪಂಚಾಯತ್ ಕಚೇರಿಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂದು ಆರೋಪಿಸಿ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಬೀಗ ಜಡಿದ ಪ್ರತಿಭಟನೆ ನಡೆಸಿರುವ ಘಟನೆ ಭದ್ರಾವತಿ ತಾಲೂಕಿನ ಅಗರದಹಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆದಿದೆ.
ಅಗರದಹಳ್ಳಿ ಗ್ರಾಮ ಪಂಚಾಯತ್ ಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಇದರಿಂದಾಗಿ ಗ್ರಾಮಸ್ಥರ ಕೆಲಸ ಕಾರ್ಯಗಳು ವಿಳಂಬ ಆಗುತ್ತಿದೆ. ಯೋಜನೆಗಳು ಸರಿಯಾಗಿ ಜನರನ್ನು ತಲುಪುತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಚೈತ್ರಾ ಕುಂದಾಪುರ ವಂಚನೆ ಪ್ರಕರಣದಿಂದ ಅಂತರ ಕಾಯ್ದುಕೊಂಡ ಬಿಜೆಪಿ-ಸಂಘಪರಿವಾರ
ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಕೇವಲ ರಾಜಕೀಯ ಪ್ರೇರಿತ, ಪಟ್ಟ ಬದ್ದ ಹಿತಾಸಕ್ತಿಗಳ ಮೆಚ್ಚುಗೆಗಾಗಿ ಮಾತ್ರ ಕೆಲಸ ಮಾಡುತ್ತಿದ್ದಾರೆ.ಗ್ರಾಮ ಪಂಚಾಯಿತಿಯ ಯಾವುದೇ ಯೋಜನೆಗಳ ಕುರಿತು ಯಾವುದೇ ಮಾಹಿತಿಗಳು ಜನಸಾಮಾನ್ಯರಿಗೆ ಸಿಗುತ್ತಿಲ್ಲ ಈ ಬಗ್ಗೆ ತಹಶೀಲ್ದಾರ್ ಗಮನಕ್ಕೆ ತಂದರು ಸಮಸ್ಯೆ ಬಗೆಹರಿದಿಲ್ಲ. ಜಂಟಿ ಸಭೆ ನಡೆಸುತ್ತೇವೆ ಎಂದು ಹೇಳಿ ಸುಮಾರು ಏಳುವರೆ ವರ್ಷಗಳಿಂದ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಬಂಧನಕ್ಕೂ ಮುನ್ನ ಬೀದರ್ ಗೆ ಭೇಟಿ ನೀಡಿದ್ದ ಚೈತ್ರಾ ಕುಂದಾಪುರ