Thursday, June 8, 2023
spot_img
- Advertisement -spot_img

ಮತಯಂತ್ರ ಪುಡಿ ಪುಡಿ ಮಾಡಿ ಗಲಾಟೆ

ವಿಜಯಪುರ: ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿರುವ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ಕಾಯ್ದಿರಿಸಲಾಗಿದ್ದ ಇವಿಎಂ ಮಶೀನ್ ಹಾಗೂ ವಿವಿಪ್ಯಾಟ್ ಮಶೀನ್‌ಗಳನ್ನು ಗ್ರಾಮಸ್ಥರು ಒಡೆದು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.

ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಇಂದು ಬೆಳಿಗ್ಗೆ ೭ ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿತ್ತು. ಮಸಬಿನಾಳ ಗ್ರಾಮದಿಂದ ಡೋಣೂರು ಗ್ರಾಮಕ್ಕೆ ಮತ ಯಂತ್ರಗಳನ್ನು ಸಾಗಿಸಲಾಗುತ್ತಿತ್ತು. ಆದರೆ, ಗ್ರಾಮಸ್ಥರು ಗ್ರಾಮದಲ್ಲಿ ಮತದಾನವನ್ನು ಅರ್ಧಕ್ಕೆ ಸ್ಥಗಿತಗೊಳಿಸಿ ಕೊಂಡ್ಯೂಯುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಅಧಿಕಾರಿಗಳ ತೆರಳುತ್ತಿದ್ದ ಕಾರ್‌ನ್ನೇ ಪಲ್ಟಿ ಮಾಡಿ ಅವರ ಮೇಲೆ ಹಲ್ಲೆಯನ್ನು ಮಾಡಿದ್ದಾರೆ. ನಂತರ ವಾಹನದಲ್ಲಿದ್ದ ಮತಯಂತ್ರಗಳನ್ನು ಒಡೆದು ಹಾಕಿ ಪುಡಿ ಪುಡಿ ಮಾಡಿದ್ದಾರೆ.

ಸಿಬ್ಬಂದಿಗಳ ಮೇಲೂ ಹಲ್ಲೆ ಮಾಡಲಾಗಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ, ವಿವಿಪ್ಯಾಟ್ ‌ಮಶೀನ್‌ಗಳನ್ನು ವಾಪಸ್ ತರೋದನ್ನ ಗಮನಿಸಿ ಸಿಬ್ಬಂದಿಗಳನ್ನ ಜನರು ಪ್ರಶ್ನಿಸಿದ್ದರು. ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ, ತಪ್ಪುಭಾವಿಸಿದ ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಹಾಕಿದ್ದಾರೆ ಎನ್ನಲಾಗಿದೆ.

Related Articles

- Advertisement -spot_img

Latest Articles