ನವದೆಹಲಿ: ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 8,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿ ಕೇಂದ್ರ ಸರ್ಕಾರ ನೇಮಿಸಿಕೊಳ್ಳಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ 740 ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಇನ್ನೂ ಮೂರು ವರ್ಷಗಳಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. ಮುಂದಿನ 3 ವರ್ಷಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳು, 3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳ ಅಡಿಯಲ್ಲಿ 740 ಶಾಲೆಗಳಿಗೆ ಕೇಂದ್ರವು 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ ಎಂದರು.
ಇನ್ನೂ 2023-24ರ ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಸ್ಟಮ್ಸ್ ಸುಂಕವನ್ನು ಹೆಚ್ಚಿಸುವುದಾಗಿ ಘೋಷಿಸುವುದರೊಂದಿಗೆ ಎಲೆಕ್ಟ್ರಿಕ್ ವಾಹನಗಳು ಸೇರಿದಂತೆ ಸಂಪೂರ್ಣವಾಗಿ ಆಮದು ಮಾಡಿಕೊಳ್ಳಲಾದ ಕಾರುಗಳ ಬೆಲೆ ಹೆಚ್ಚಳವಾಗಲಿದೆ ಎಂದು ಮಾಹಿತಿ ನೀಡಿದರು. ಇನ್ನೂ ಬಜೆಟ್ ನಲ್ಲಿ ಪ್ರಾದೇಶಿಕ ಸಂಪರ್ಕ ಸುಧಾರಣೆಗೆ 50ಕ್ಕೂ ಹೆಚ್ಚು ವಿಮಾನ ನಿಲ್ದಾಣ, ಏರೋಡ್ರೋಮ್, ಹೆಲಿಪೋರ್ಟ್‌ಗಳನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ. ದೇಶದಾದ್ಯಂತ ಪ್ರಾದೇಶಿಕ ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಉಡಾನ್ ಯೋಜನೆಗೆ ಈ ಕ್ರಮದಿಂದ ಮತ್ತಷ್ಟು ಉತ್ತೇಜನ ಸಿಗುವ ನಿರೀಕ್ಷೆಯಿದೆ.
‘ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸಲು 50 ಹೆಚ್ಚುವರಿ ವಿಮಾನ ನಿಲ್ದಾಣಗಳು, ಏರೋಡ್ರೋಮ್, ಹೆಲಿಪ್ಯಾಡ್‌ಗಳು ಮತ್ತು ಜಲ ಮಾರ್ಗಗಳನ್ನು ರೂಪಿಸಲಾಗುವುದು’ ಎಂದು ಹೇಳಿದರು. ಇನ್ನೂ ವಾಣಿಜ್ಯ ವಿವಾದಗಳ ಇತ್ಯರ್ಥಕ್ಕಾಗಿ ಬಜೆಟ್ ನಲ್ಲಿ ವಿವಾದ್ ಸೆೇ ವಿಶ್ವಾಸ್-2 ಯೋಜನೆಯಡಿ ಸರ್ಕಾರ ಮತ್ತೊಂದು ಪರಿಹಾರ ಯೋಜನೆ ಜಾರಿಗೆ ತರಲಿದೆ ಹಾಗೂ ಎಂಜಿನಿಯರಿಂಗ್ ಸಂಸ್ಥೆಗಳಲ್ಲಿ 5 ಜಿ ಸೇವೆಗಾಗಿ ಆ್ಯಪ್ ಅಭಿವೃದ್ಧಿಗಾಗಿ 100 ಲ್ಯಾಬ್ ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.