ಬೆಂಗಳೂರು: ಇದು ಸತ್ಯಕ್ಕೆ ದೂರವಾದ ವಿಚಾರ, ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಯಾವುದೇ ಚರ್ಚೆ ಮಾಡಿಲ್ಲ ಎಂದು ಸಚಿವ ವಿ ಸೊಮಣ್ಣ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎನ್ನುವುದು ವದಂತಿ, ಸಿದ್ದರಾಮಯ್ಯ ನಾವು ಒಟ್ಟಿಗೆ ರಾಜಕೀಯ ಪ್ರವೇಶ ಮಾಡಿದ್ದೇವೆ. ನಾನು ಸ್ಪರ್ಧೆ ಮಾಡುವ ಬಗ್ಗೆ ಪ್ರಶ್ನೆನೇ ಇಲ್ಲ ಎಂದು ಖಡಕ್ ಆಗಿಯೇ ಹೇಳಿದರು.
ಸಿಎಂ ಬಿಎಸ್ ವೈ ಮುನಿಸು ಬಗ್ಗೆ ಪ್ರತಿಕ್ರಿಯಿಸಿ, ಅವರು ಆಕಾಶ, ನಾನು ನಕ್ಷತ್ರ, ನಕ್ಷತ್ರ ಯಾವಾಗ ಮಿಂಚಿ ಮಾಯಾ ಆಗುತ್ತೆ ಗೊತ್ತಿಲ್ಲ. ನಾವು ಅವರ ಜೊತೆಗೆ ಹೋಲಿಕೆ ಮಾಡಿಕೊಳ್ಳಲ್ಲ. ಅವರು ಕರೆದಾಗ ಹೋಗುತ್ತೇನೆ. ನಾನು ಅವರ ಬಗ್ಗೆ ಮಾತಾಡುವಷ್ಟು ದೊಡ್ಡವನಲ್ಲ. ನಾವು ಅವರನ್ನು ತುಂಬಾ ಗೌರವಿಸುತ್ತೇವ ಎಂದರು. ನೀವು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು. ನಿಮ್ಮ ಮಗನ ಸ್ಪರ್ಧೆ ಬಗ್ಗೆ ನಾವು ನಿರ್ಧಾರ ಮಾಡುತ್ತೇವೆ. ದೊಡ್ಡ ಮಟ್ಟದಲ್ಲಿ ಪಕ್ಷಕ್ಕೆ ನಿಮ್ಮ ಅವಶ್ಯಕತೆ ಇದೆ ಎಂದಿದ್ದಾರೆ ಎನ್ನಲಾಗಿದೆ.
ಗುಬ್ಬಿ ಕ್ಷೇತ್ರದಿಂದ ಪುತ್ರನಿಗೆ ಟಿಕೆಟ್ ನೀಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ. ವರಿಷ್ಠರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.