ಬೆಂಗಳೂರು: 25 ಲಕ್ಷ ರೂ. ಒಳಗಿನ ಕಾಮಗಾರಿ ನಡೆಸಿದ ಗುತ್ತಿಗೆದಾರರ ಬಿಲ್ ಕ್ಲಿಯರ್ ಮಾಡಲಿದ್ದೇವೆ ಎಂದು ಬಿಬಿಎಂಪಿ ಚೀಫ್ ಕಮಿಷನರ್ ತುಷಾರ್ ಗಿರಿನಾಥ್ ಹೇಳಿದ್ದಾರೆ. ಮೊದಲ ಹಂತದಲ್ಲಿ 42 ಕೋಟಿ ಹಣ ಬಿಡುಗಡೆ ಮಾಡಿದ್ದೇವೆ ಎಂದಿದ್ದಾರೆ.
ಉಳಿದ ಗುತ್ತಿಗೆದಾರರ ಬಾಕಿ ಬಿಲ್ ತನಿಖೆ ಹಂತದಲ್ಲಿದೆ. ತನಿಖಾ ವರದಿ ಬಂದ ಬಳಿಕ ಹಂತ ಹಂತವಾಗಿ ಬಿಲ್ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಲೋಕಾಯುಕ್ತ ದಾಳಿ; ಸರ್ವೆ ಸೂಪರ್‌ವೈಸರ್ ಬಳಿ ಐದೈದು ಬಾರ್ ಲೈಸೆನ್ಸ್!
ಇದಕ್ಕೂ ಮೊದಲು ಸುದ್ದಿಗೋಷ್ಠಿ ನಡೆಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬಾಕಿ ಬಿಲ್ ಪಾವತಿಗೆ ಸರ್ಕಾರಕ್ಕೆ ಗಡುವು ನೀಡಿದ್ದರು. ಕಾಂಗ್ರೆಸ್ ಸರ್ಕಾರದಲ್ಲಿ ಪಂಚಖಾತ್ರಿ ಯೋಜನೆಗಳಿಗೆ ಹಣ ಖರ್ಚಾಗಿದೆ. ಹೀಗಾಗಿ ಬಾಕಿ ಬಿಲ್‍ಗಳಿಗೆ ಸದ್ಯದ ಪರಿಸ್ಥಿತಿಯಲ್ಲಿ ಹಣ ಇಲ್ಲ. ಸ್ವಲ್ಪ ದಿನ ಸಹನೆಯಿಂದಿರುವಂತೆ ಸರ್ಕಾರ ಗುತ್ತಿಗೆದಾರರನ್ನು ಮನವೊಲಿಸುವ ಪ್ರಯತ್ನ ನಡೆಸಿದೆ. ಇದನ್ನು ಒಪ್ಪದ ಗುತ್ತಿಗೆದಾರರು ಆ. 31 ರೊಳಗೆ ಬಾಕಿ ಬಿಲ್ ಪಾವತಿ ಮಾಡದೇ ಇದ್ದರೆ, ಕಾಮಗಾರಿಗಳನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.