ಶಿವಮೊಗ್ಗ: ‘ಇಂಡಿಯಾ’ ಒಕ್ಕೂಟದ ಸದಸ್ಯರು ಗಾಬರಿಯಾಗಿದ್ದು, ಸಣ್ಣ ಸಣ್ಣ ವಿಚಾರಗಳನ್ನು ರಾಜಕೀಯಗೊಳಿಸುತ್ತಿದ್ದಾರೆ’ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದ್ದಾರೆ.
ನಗರದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂಡಿಯಾ’ ವನ್ನು ಭಾರತ ಎಂದು ಮರುನಾಮಕರಣ ಮಾಡುವ ವಿಚಾರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ‘ಭಾರತ’ ಎಂದು ಕರೆದರೆ ತಪ್ಪೇನಿಲ್ಲ. ನಮ್ಮ ‘ಇಂಡಿಯಾ’ ಒಕ್ಕೂಟದ ಸದಸ್ಯರು ಇಂಡಿಯಾ ಮರುನಾಮಕರಣದ ಬಗ್ಗೆ ಗಾಬರಿಯಾಗಿದ್ದು, ಚಿಕ್ಕ ಪುಟ್ಟ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ವಿಪಕ್ಷಗಳ I.N.D.I.A ರಚನೆಯಾದ ಬಳಿಕ ನಾವು ಭಯಗೊಂಡಿಲ್ಲ. ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ, ಮುಂದಿನ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ ಎಂದರು.
ಇದನ್ನೂ ಓದಿ : ಬೆಂಗಳೂರಿನಲ್ಲಿ ಡೆಂಘೀ ಪ್ರಕರಣ ದಿಡೀರ್ ಹೆಚ್ಚಳ: 7 ಮಂದಿ ಸಾವು!
ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅತಿ ಬುದ್ದಿವಂತರು ಈ ರೀತಿ ಹೇಳಿಕೆ ಕೊಡ್ತಾರೆ, ಈ ಬಗ್ಗೆ ರಾಷ್ಟ್ರದಾದ್ಯಂತ ಚರ್ಚೆ ಆಗುತ್ತಿದೆ. ಸ್ಟಾಲಿನ್ ತಾಯಿ ಪ್ರತಿನಿತ್ಯ ಎರಡು ಹೊತ್ತು ದೇವಸ್ಥಾನಕ್ಕೆ ಹೋಗಿ ಬರುತ್ತಾರೆ. ದೇವರಲ್ಲಿ ನಂಬಿಕೆ ಇದೆ. ಸನಾತನ ಧರ್ಮ ಒಂದು ನಂಬಿಕೆ, ಇಂತಹ ವಿಷಯಗಳ ಬಗ್ಗೆ ಮಾತನಾಡೋದೆ ತಪ್ಪು. ಬಿಜೆಪಿ ಚುನಾವಣೆಗೋಸ್ಕರ ರಾಮ ಮಂದಿರ ಕಟ್ಟುತ್ತಿಲ್ಲ, ಅನೇಕ ವರ್ಷದ ಹೋರಾಟದ ಫಲವಾಗಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಮೋದಿ ಪ್ರಧಾನಿಯಾದ ನಂತರ ಪ್ರಪಂಚದಲ್ಲಿ ಭಾರತಕ್ಕೆ ತನ್ನದೇ ಆದ ಸ್ಥಾನ ಸಿಕ್ಕಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಬಿಜೆಪಿ ಸ್ನೇಹಿತರು ಡೆಲ್ಲಿಗೆ ತೆರಳಿ ಮೇಕೆದಾಟು ತರಲು ಒತ್ತಡ ಹಾಕಲಿ; ಡಿಕೆಶಿ
ಬರಗಾಲ ಘೋಷಣೆ ಬಗ್ಗೆ ಮಾತನಾಡಿ, ‘ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡದೇ, ಮಳೆ ಬರುತ್ತೆ ಎಂದು ಕಾಲಹರಣ ಮಾಡುತ್ತಾ, ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಇಡೀ ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡಬೇಕು. ನಮ್ಮ ರೈತರ ಹಿತಾಸಕ್ತಿ ಕಾಪಾಡಬೇಕಿರೋದು ರಾಜ್ಯ ಸರ್ಕಾರದ ಕರ್ತವ್ಯ. ಈ ಸರ್ಕಾರ ರೈತರ ಹಿತ ಕಾಪಾಡುತ್ತದೆ ಅಂದುಕೊಂಡಿದ್ದೇವು. ಆದರೆ, ಆ ರೀತಿ ಆಗುತ್ತಿಲ್ಲ. ಕಾವೇರಿ ನದಿ ನೀರು ವಿಷಯದಲ್ಲಿ ಕೂಡಾ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ’ ಎಂದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.