ಧಾರವಾಡ : ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಗಾಲ ಘೋಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಧಾರವಾಡ ಕೃಷಿ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಆಯೋಜಿಸಿದ್ದ ಕೃಷಿ ಮೇಳ-2023ರನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರಗಾಲ ಘೋಷಣೆಗೆ ಕೇಂದ್ರ ಸರ್ಕಾರದ ನೆರವು ಅವಶ್ಯಕವಾಗಿದೆ. ಮುಂದಿನ ಬಾರಿ ನಮ್ಮ ಬಜೆಟ್ 3 ಲಕ್ಷದ 80 ಸಾವಿರ ಕೋಟಿ ರೂಪಾಯಿ ಇರಲಿದೆ. ನಾವು ರಾಜ್ಯ ದಿವಾಳಿಯಾಗುವುದಕ್ಕೆ ಬಿಡುವುದಿಲ್ಲ. ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡೇ ಮಾಡುತ್ತೇವೆ. ಈಗಾಗಲೇ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂಪಾಯಿ ಖರ್ಚಾಗಲಿದೆ ಎಂದರು.
ಇದನ್ನೂ ಓದಿ : ‘ಜಾತ್ಯಾತೀತ ಅಂದ್ಕೊಂಡು ಕೋಮುವಾದಿಗಳ ಜೊತೆ ಕೈ ಜೋಡಿಸಿದ್ದಾರೆ’
ರಾಜ್ಯದ ಮುಖ್ಯಮಂತ್ರಿಯಾಗಿ ಮಹದಾಯಿ ಹಾಗೂ ಕಳಸಾ ಬಂಡೂರಿ ಸಂಬಂಧ ಪ್ರಧಾನಿ ಬಳಿಗೆ ಮತ್ತೊಮ್ಮೆ ನಿಯೋಗ ಕೊಂಡೊಯ್ಯಲು ಸಿದ್ದನಿದ್ದೇನೆ. ಈ ವರ್ಷ ಬರಗಾಲ ಬಂದಿದೆ. ಕೇಂದ್ರ ಸರ್ಕಾರವೂ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಆದರೆ, ಅದಕ್ಕೆ ಉತ್ತರ ಸಿಕ್ಕಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಮಹದಾಯಿ ಕಳಸಾ ಬಂಡೂರಿ ಸಂಬಂಧ ನಿರಂತರ ಹೋರಾಟ ನಡೆಯುತ್ತಿದೆ. ಹಾಗಾಗಿ, ಗೋವಾ, ಮಹಾರಾಷ್ಟ್ರ ಸರ್ಕಾರದವರನ್ನು ಕರೆದು ಮಾತನಾಡಿ ಎಂದು ಪ್ರಧಾನಿಗೆ ಮನವಿ ಮಾಡಿದ್ದೆ. ಆದರೆ, ಪ್ರಧಾನಿ ಕಚೇರಿಯಿಂದ ನಮಗೆ ಉತ್ತರ ಸಿಕ್ಕಿಲ್ಲ ಎಂದು ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.