Monday, March 27, 2023
spot_img
- Advertisement -spot_img

ನಾನು ಬಿಜೆಪಿ ತೊರೆದು ಜನವರಿಯಲ್ಲಿ ಕಾಂಗ್ರೆಸ್ ಸೇರುತ್ತೇನೆ :ಮಾಜಿ ಎಂಎಲ್​ಸಿ ಸಂದೇಶ್ ನಾಗರಾಜ್

ಮೈಸೂರು: ಬಿಜೆಪಿಯಂತಹ ಮೋಸಗಾರರು ಯಾರೂ ಇಲ್ಲ. ನಾನು ಬಿಜೆಪಿ ತೊರೆದು ಜನವರಿಯಲ್ಲಿ ಕಾಂಗ್ರೆಸ್ ಸೇರುತ್ತೇನೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯರವರ ಜೊತೆ ಮಾತನಾಡಿದ್ದೇನೆ ಎಂದು ಮಾಜಿ ಎಂಎಲ್​ಸಿ ಸಂದೇಶ್ ನಾಗರಾಜ್ ಹೇಳಿದರು.

ಮೈಸೂರಿನಲ್ಲಿ ಮಾತನಾಡಿ, ಈ ಬಾರಿ ಬಿಜೆಪಿ ಗೆಲ್ಲುವುದಿಲ್ಲ, ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ. ಪರಿಷತ್​ ಸ್ಥಾನ ಕೊಡುತ್ತೇವೆ ಎಂದು ನನ್ನನ್ನು ಬಿಜೆಪಿಗೆ ಕರೆತಂದರು. ಬಿಜೆಪಿಯಿಂದ ನನಗೆ ಅನ್ಯಾಯವಾಗಿದೆ ನಾನು ಬಿಜೆಪಿ ತೊರೆಯುತ್ತೇನೆ ಎಂದರು. ಇದೇ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಶಾಸಕರು ಮತ್ತೆ ಕಾಂಗ್ರೆಸ್​ಗೆ ಸೇರ್ಪಡೆಯಾಗುವ ವಿಚಾರ ಸಂಬಂಧ ಮಾತನಾಡಿದ ಸಚಿವ ಕೆ.ಸಿ.ನಾರಾಯಣ ಗೌಡ, ನಾವು ಹದಿನೇಳು ಮಂದಿ ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದಿದ್ದಾರೆ.

ಮೈಸೂರಿನಲ್ಲಿ ಹೇಳಿಕೆ ನೀಡಿ, ಬಿಜೆಪಿ ಸೇರ್ಪಡೆ ಆದ ಬಳಿಕ ನಮ್ಮನ್ನು ಪಕ್ಷ ಚೆನ್ನಾಗಿ ನಡೆಸಿಕೊಂಡಿದೆ. ಸಚಿವ ಸ್ಥಾನ ಕೊಟ್ಟು ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ. ಹಾಗಾಗಿ ನಾವು ಬಿಜೆಪಿ ತೊರೆಯುವುದಿಲ್ಲ, ಬಿಜೆಪಿಯಲ್ಲೇ ಮುಂದುವರೆಯುತ್ತೇವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ ಎಂದರು.

Related Articles

- Advertisement -

Latest Articles