ರಾಮನಗರ: ಮೈತ್ರಿ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇವೆ, ಬಜಾರ್‌ನಲ್ಲಿ ಅಲ್ಲ ಎಂದು ಚನ್ನಪಟ್ಟಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದರು.
ಬಿಜೆಪಿ -ಜೆಡಿಎಸ್ ಮೈತ್ರಿ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ದೇವೇಗೌಡರು ತೀರ್ಮಾನ ಮಾಡ್ತಾರೆ, ಸದ್ಯ ಬಿಜೆಪಿ ನಾಯಕರು ತಮ್ಮ ಅಭಿಪ್ರಾಯ ಹೇಳಿದ್ದಾರೆ, ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಈಗ ಬಿಜೆಪಿಯವರಿಗೆ ಜೆಡಿಎಸ್ ನ ಹಣ್ಣು ಚೆನ್ನಾಗಿದೆ ಅಂತ ಗೊತ್ತಾಗಿದೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡಿ, ಸೆ.10ರಂದು ಪಕ್ಷದ ಕಾರ್ಯಕರ್ತರ ಸಭೆ ಇದೆ. ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ತಿಳಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.