ಬೆಂಗಳೂರು: ತಮಿಳುನಾಡಿಗೆ ನೀರು ಬಿಟ್ಟರೆ ಖಂಡಿತ ಉಗ್ರ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ನಡೆದ ಕಾವೇರಿ ಜಲಾನಯನ ಪ್ರದೇಶ ಕುರಿತ ಸಭೆ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನಮ್ಮ ರೈತರಿಗೆ ಪರಿಪೂರ್ಣವಾಗಿ ನೀರು ಕೊಟ್ಟಿಲ್ಲ. ಕುಡಿಯುವ ನೀರಿಗೂ ಅಭಾವ ಎದುರಾಗೋ ಸಾಧ್ಯತೆ ಇದೆ. ನಮ್ಮ ರಾಜ್ಯದ ಹಿತಾಸಕ್ತಿ ಬಲಿಕೊಟ್ಟು. ತಮಿಳುನಾಡು ಬೆಳೆಗೆ ನೀರು ಕೊಟ್ಟಿದ್ದಾರೆ. ಸರ್ವಪಕ್ಷ ಸಭೆಯಲ್ಲಿ ಸಮರ್ಪಕವಾದ ಉತ್ತರ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಚೈತ್ರಾ ಕುಂದಾಪುರ ವಂಚನೆ ಕೇಸ್; ಚಕ್ರವರ್ತಿ ಸೂಲಿಬೆಲೆಗೂ ಸಿಸಿಬಿ ನೋಟಿಸ್?
ನೀರಿಲ್ಲದೆ ರೈತರ ಬೆಳೆ ನಾಶವಾಗಿದೆ. ಪ್ರತಿ ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಕೊಡಬೇಕು ಎಂದು ಆಗ್ರಹಿಸುತ್ತೇನೆ. ಕಾವೇರಿ ನೀರು ಹಂಚಿಕೆ ಸಂಬಂಧ ಕೋರ್ಟ್‌ನಲ್ಲಿ ಗಂಭೀರವಾಗಿ ವಾದ ಮಾಡಬೇಕು. ಸೀನಿಯರ್ ಲಾಯರ್ ಎಲ್ಲರೂ ಡಿಕೆಶಿಗೆ ಗೊತ್ತು. ಅವರು ಲಾಯರ್ ವಿಚಾರದಲ್ಲಿ ನಿಪುಣರಿದ್ದಾರೆ. ಒಳ್ಳೆಯ ವಕೀಲರನ್ನು ನೇಮಿಸಿ ಎಂದು ಸಲಹೆ ಕೊಡುತ್ತೇನೆ. ಯಾವುದೇ ಕಾರಣಕ್ಕೂ ನೀರನ್ನು ಬಿಡಬಾರದು, ನೀರು ಬಿಟ್ಟರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಕಡೆ ಕೈ ಮಾಡಿ ತೋರಿಸುತ್ತಿದ್ದಾರೆ. ನಮ್ಮ ಸರ್ಕಾರದ ಕಾಲದಲ್ಲಿ ಬರ, ಪ್ರವಾಹ ಬಂದರೂ ನಾವು ಪರಿಹಾರ ಕೊಟ್ಟಿದ್ದೇವೆ. ಇವರು ತಮಿಳುನಾಡು ಸಿಎಂ ಜೊತೆ ಮಾತನಾಡಲಿ. ಅದು ಬಿಟ್ಟು ಕೇಂದ್ರಕ್ಕೆ ಪತ್ರ ಬರೆಯುತ್ತಾರೆ ಎಂದು ಬೊಮ್ಮಾಯಿ ಕಿಡಿಕಾರಿದರು.
ಇದನ್ನೂ ಓದಿ: ಜೀವನದ ಕೊನೆವರೆಗೂ ಡಿ.ಕೆ. ಶಿವಕುಮಾರ್ ಜೊತೆ ಇರ್ತೇನೆ: ಕಬಡ್ಡಿ ಬಾಬು
ಬಿ.ಎಸ್ ಯಡಿಯೂರಪ್ಪ ಹೇಳಿದ್ದೇನು?
INDIA ಒಕ್ಕೂಟದ ಜೊತೆ ಇರುವ ಡಿಎಂಕೆ ಸರ್ಕಾರ ತಮಿಳುನಾಡಿನಲ್ಲಿದೆ ಇದೆ. ಅವರ ಜೊತೆ ಕಾಂಗ್ರೆಸ್ ಮಾತನಾಡಲಿ. ಕೋರ್ಟ್‌ಗೆ ಪರಿಸ್ಥಿತಿ ಅರ್ಥ ಮಾಡಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.