ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ಪ್ರಮುಖವಾಗಿ ಇಂದಿನ ಸಭೆಯಲ್ಲಿ ಬರ ಪೀಡಿತ ತಾಲೂಕುಗಳ ಘೋಷಣೆ ಮಾಡುವ ನಿರೀಕ್ಷೆಯಿದೆ. ಈ ಹಿನ್ನೆಲೆ ಸಭೆ ಮಹತ್ವ ಪಡೆದುಕೊಂಡಿದೆ. ಇನ್ನುಳಿದಂತೆ ಈ ಕೆಳಗಿನ ವಿಷಯಗಳು ಬಗ್ಗೆ ಚರ್ಚೆ ನಡೆಯಬಹುದು.
- ಸ್ಥಳೀಯ ಸಂಸ್ಥೆಗಳ ಮೀಸಲಾತಿ ಸಂಬಂಧ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿಯ ಶಿಫಾರಸ್ಸಿಗೆ ಅಂಗೀಕಾರ ನೀಡುವುದು
- ಉಗ್ರಾಣಗಳ ನಿರ್ಮಾಣಕ್ಕೆ 13 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವುದು
- ಕೆಪಿಎಸ್‌ಸಿಯ ಎರಡು ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು
- 5ನೇ ಹಣಕಾಸು ಆಯೋಗ ರಚಿಸುವುದು
- ಮಂಡ್ಯ,ಕೊಪ್ಪಳ, ಕಲಬುರಗಿಯಲ್ಲಿ ವೈದ್ಯಕೀಯ ಕಾಲೇಜುಗಳ ಕಾಮಗಾರಿಗಳಿಗೆ ಹೆಚ್ಚುವರಿ ಮೊತ್ತಕ್ಕೆ ಅನುಮೋದನೆ ನೀಡುವುದು
- ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕಕ್ಕೆ ತಿದ್ದುಪಡಿ ತರುವುದು
- ವೃತ್ತಿ ಶಿಕ್ಷಣ ಆಧರಿತ (ಜೆಒಸಿ)ಯ ಉಪನ್ಯಾಸಕರ ಬಿಇಡಿ ಶಿಕ್ಷಣಕ್ಕೆ ಅನುಮತಿ ನೀಡುವುದು
- ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಗೆ 14.16 ರೂ. ಸೇವಾ ಶುಲ್ಕ ನಿಗದಿ ಮಾಡುವುದು
- ಕೆಎಸ್‌ಆರ್‌ಟಿಸಿಗೆ 100 ಕೋಟಿ ರೂ. ವೆಚ್ಚದಲ್ಲಿ 250 ಹೊಸ ಬಸ್ ಗಳನ್ನು ಖರೀದಿಸುವುದು
- ವಾಯುವ್ಯ ಸಾರಿಗೆ ಸಂಸ್ಥೆಗೆ 150 ಕೋಟಿ ರೂ. ವೆಚ್ಚದಲ್ಲಿ 375 ಹೊಸ ಬಸ್ ಗಳನ್ನು ಖರೀದಿಸುವುದು
- ಬಿಎಂಟಿಸಿಗೆ 150 ಕೋಟಿ ರೂ. ವೆಚ್ಚದಲ್ಲಿ ಎಸಿ ಎಲೆಕ್ಟ್ರಿಕ್ ಬಸ್ ಗಳನ್ನು ಖರೀದಿಸುವುದು
- ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ 100 ಕೋಟಿ ರೂ. ವೆಚ್ಚದಲ್ಲಿ 250 ಹೊಸ ಬಸ್ ಗಳನ್ನು ಖರೀದಿಸುವುದು
- ಬರ ತಾಲೂಕುಗಳ ಘೋಷಣೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಸಾಧ್ಯತೆ
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.