Sunday, October 1, 2023
spot_img
- Advertisement -spot_img

‘ಹಿಂದೂಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದ್ದರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ’

ತುಮಕೂರು: ಹಿಂದೂಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟಿಸಿದ್ದರು ಎಂಬುದು ಪ್ರಶ್ನೆಯಾಗಿಯೇ ಉಳಿದಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಕೊರಟಗೆರೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದುಧರ್ಮ ಯಾವಾಗ ಹುಟ್ಟಿತು ಎಂಬುದು ಪ್ರಶ್ನೆಯಾಗಿ ಉಳಿದಿದೆ ಎಂದಿದ್ದಾರೆ.

ನಮ್ಮ ದೇಶದಲ್ಲಿ ಬೌದ್ಧಧರ್ಮ ಮತ್ತು ಜೈನಧರ್ಮ ಹುಟ್ಟಿರುವ ಇತಿಹಾಸವಿದೆ. ವಿದೇಶದಿಂದ ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳು ನಮ್ಮ ದೇಶಕ್ಕೆ ಬಂದಿದೆ. ಪ್ರಪಂಚದ ಎಲ್ಲಾ ಧರ್ಮಗಳ ಸಾರಾಂಶ ಮನುಕುಲಕ್ಕೆ ಒಳ್ಳೆದಾಗಲಿ ಎಂಬುದಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಗಾಂಧಿಯನ್ನು ಕೊಂದ ಮನಸ್ಥಿತಿಯೇ ಗೌರಿಯನ್ನು ಕೊಂದಿದೆ: ಸಿಎಂ ಸಿದ್ದರಾಮಯ್ಯ

ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್​ ಮಾಡಿರುವ ಟೀಕೆ ಭಾರೀ ಸದ್ದು ಮಾಡುತ್ತಿದೆ. ಈ ನಡುವೆ ಪರಮೇಶ್ವರ್ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles