ಶಿವಮೊಗ್ಗ: ಬಡವನು ಕೂಡ ವಿಮಾನಯಾನ ಮಾಡುವಂತಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ನೂತನ ಏರ್ ಪೋರ್ಟ್ ಉದ್ಘಾಟಿಸಿ ಮಾತನಾಡಿ, ಶಿವಮೊಗ್ಗದ ಬಹುದಿನದ ಬೇಡಿಕೆ ಈಗ ಈಡೇರಿದೆವಿಮಾನ ಯಾನ ಕ್ಷೇತ್ರದಲ್ಲಿ ಭಾರತ ಬಹಳಷ್ಟು ಅಭಿವೃದ್ದಿ ಹೊಂದಿದೆ. ಕರ್ನಾಟಕದಲ್ಲಿ ಅಭಿವೃದ್ದಿಯ ರಥ ಸಾಗುತ್ತಿದೆ. ಡಬಲ್ ಇಂಜಿನ್ ಸರ್ಕಾರ ಅಭಿವೃದ್ದಿಯ ಕೆಲಸ ಮಾಡುತ್ತಿದೆ ಎಂದರು.
ಹವಾಯಿ ಚಪ್ಪಲಿ ಧರಿಸುವವರೂ ವಿಮಾನದಲ್ಲಿ ಪ್ರಯಾಣಿಸ್ಬೇಕು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸಣ್ಣಪುಟ್ಟ ನಗರಗಳಿಗೂ ಏರ್ ಪೋರ್ಟ್ ಆಗಿದೆ , ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಭಿವೃದ್ಧಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆಗುಂಬೆ ಸೂರ್ಯಾಸ್ತವನ್ನು ಮರೆಯಲ್ಲ, ಇಲ್ಲಿ ಜೋಗ ಜಲಪಾತ ಇದೆ. ಸಿಗಂದೂರು ಚೌಡೇಶ್ವರಿ, ಕೋಟೆ ಆಂಜನೇಯ ದೇವಸ್ಥಾನವಿದೆ. ಇಲ್ಲಿಗೆ ವಿಮಾನ ಪ್ರಯಾಣದ ಸಂಪರ್ಕ ಅವಶ್ಯಕವಾಗಿದೆ ಎಂದು ತಿಳಿಸಿದರು. ಶಿವಮೊಗ್ಗದಲ್ಲಿ ನೂತನ ಏರ್ ಪೋರ್ಟ್ ಉದ್ಘಾಟಿಸಿದ ಪ್ರಧಾನಿ ಮೋದಿ ಬಳಿಕ ಜಲಜೀವನ್ ಮಿಷನ್ ಕಾಮಗಾರಿ ಸೇರಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ.