ನವದೆಹಲಿ: ಪುಲ್ವಾಮ ದಾಳಿ ನಡೆದಾಗ ಸಿಡಿದೆದ್ದ ಪ್ರಧಾನಿ ಮೋದಿ ಅವರು ಈಗ ಜಮ್ಮು ಕಾಶ್ಮೀರದಲ್ಲಿ ನಾಲ್ಕು ದಿನದಿಂದ ದಾಳಿಗಳಾಗಿದ್ದು, ಈಗೇಕೆ ಮೌನ ವಹಿಸಿದ್ದಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆಕ್ರೋಶ ಹೊರಹಾಕಿದ್ದಾರೆ.
ಆರ್ಟಿಕಲ್ 370 ರದ್ದಾದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಕೊನೆಗೊಳ್ಳುತ್ತದೆ ಎಂದು ಹೇಳುತ್ತಿರುವ ಎನ್‌ಡಿಎ ಸರ್ಕಾರ, ಅದು ಎಲ್ಲಿ ಕೊನೆಗೊಂಡಿತು ಎಂದು ಈಗ ಉತ್ತರಿಸಬೇಕು.
ಇದನ್ನೂ ಓದಿ: ಭಾರತ ನಿಮ್ಮ ತಂದೆಗೆ ಸೇರಿದ್ದಾ?; ಕೇಜ್ರಿವಾಲ್ ಕಿಡಿ!
ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಪಡೆ ಅಧಿಕಾರಿಗಳು ಮತ್ತು ಒಬ್ಬ ಯೋಧ ಹುತಾತ್ಮರಾದ ಕೋಕರ್ನಾಗ್ ದಾಳಿಯನ್ನು ಖಂಡಿಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಹತ್ಯೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ‘ಮೌನ’ ವಹಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಮನವಿ; ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸ್ಟಾಲಿನ್
‘ಘಟನೆಯನ್ನು ನಾನು ಖಂಡಿಸುತ್ತೇನೆ. ಪಾಕಿಸ್ತಾನದ ಭಯೋತ್ಪಾದಕರು ಬಂದು ಕರ್ನಲ್, ಮೇಜರ್ ಮತ್ತು ಡೆಪ್ಯುಟಿ ಎಸ್ಪಿಯನ್ನು ಕೊಂದರು. ಆದರೆ ಪ್ರಧಾನಿ ಮೌನವಹಿಸಿದ್ದಾರೆ. ಪಾಕಿಸ್ತಾನದಿಂದ ತರಬೇತಿ ಪಡೆದ ಭಯೋತ್ಪಾದಕರು ಬಂದು ಸೈನಿಕರನ್ನು ಕೊಲ್ಲುತ್ತಿದ್ದಾರೆ. ನಾವು ನರೇಂದ್ರ ಮೋದಿಯವರ ಹೆಸರಿನ ಅಹಮದಾಬಾದ್ ಕ್ರೀಡಾಂಗಣದಲ್ಲಿ ಪಾಕಿಸ್ತಾನದೊಂದಿಗೆ ಕ್ರಿಕೆಟ್ ಪಂದ್ಯವನ್ನು ಆಡೋಣವೇ?’ ಎಂದು ಅಪಹಾಸ್ಯ ಮಾಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.