Monday, March 27, 2023
spot_img
- Advertisement -spot_img

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿರ್ಲಕ್ಷ್ಯಿತ ಹಾಗೂ ಶೋಷಿತರ ಸಬಲೀಕರಣ : ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು : ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿರ್ಲಕ್ಷ್ಯಿತ ಹಾಗೂ ಶೋಷಿತರ ಸಬಲೀಕರಣ ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.


ಎಚ್‌ ಡಿ ಕೋಟೆಯಲ್ಲಿ ವಿಶ್ವಕರ್ಮ ಜಯಂತಿಯಲ್ಲಿ ಮಾತನಾಡಿ, ಜಾತಿ ವ್ಯವಸ್ಥೆಯು ಸಮಾಜದಲ್ಲಿ ಅಸಮಾನತೆಯನ್ನು ಸೃಷ್ಟಿಸಿದೆ, ಇದು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಅಸಮಾನತೆಗೆ ಮತ್ತಷ್ಟು ಸಮಸ್ಯೆಯನ್ನು ತಂದೊಡ್ಡುತ್ತಿದೆ. . ಅವರನ್ನು ಮುಖ್ಯವಾಹಿನಿಗೆ ತಂದರೆ ಮಾತ್ರ ನಾವು ಸಮಾನತೆಯನ್ನು ಕಾಣಬಹುದು ಎಂದು ಹೇಳಿದ್ದಾರೆ.

2023 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳುತ್ತದೆ ಎಂದರು. ಕಾಂಗ್ರೆಸ್ ನಿರ್ಲಕ್ಷಿತ ಸಮುದಾಯಗಳನ್ನು ಸಬಲೀಕರಣಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಪಕ್ಷ ಶ್ರಮಿಸಲಿದೆ ಇದೇ ವೇಳೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವಿಶ್ವಕರ್ಮ ಸಮುದಾಯದ ಬಲವರ್ಧನೆಗೆ ಶ್ರಮಿಸುವುದಾಗಿ ಘೋಷಿಸಿದರು. ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ವಿಶ್ವಕರ್ಮ ಅಭಿವೃದ್ಧಿ ಮಂಡಳಿಗೆ ರೂ.25 ಕೋಟಿ ಮೀಸಲಿಟ್ಟಿದ್ದೆವು.

ನಂತರ ಬಂದ ಸರಕಾರಗಳು ಅನುದಾನ ಹೆಚ್ಚಿಸಬೇಕಿತ್ತು. ಇದೇ ವೇಳೆ ವಿಶ್ವಕರ್ಮ ಸಮಾಜದ ಮುಖಂಡರು, ಸಿದ್ದರಾಮಯ್ಯ ಅವರಿಗೆ ಸಮುದಾಯ ಭವನ ನಿರ್ಮಿಸಲು ಭೂಮಿ ಮಂಜೂರು ಮಾಡಿಸಿಕೊಡುವಂತೆ ಒತ್ತಾಯಿಸಿದರು.

Related Articles

- Advertisement -

Latest Articles