ತಮಿಳುನಾಡು : ಮುಂಬರುವ ಲೋಕಸಭಾ ಚುನಾವಣೆ ವೇಳೆ ತಮಿಳುನಾಡಿನಲ್ಲಿ ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ನಾನು ಪಕ್ಷದಲ್ಲಿರುವುದಿಲ್ಲ ಎಂದು ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದ್ರಾವಿಡ ಪಕ್ಷಗಳ ನಡುವೆ ಜನರಿಗೆ ಪ್ರಮುಖ ಆಯ್ಕೆ ನಾವಾಗಬೇಕೆ ವಿನಃ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಬಾರದು. ನಾವು ಏಕಾಂಗಿಯಾಗಿ ಸ್ಪರ್ಧಿಸಿದರೆ ಮಾತ್ರವೇ ಉತ್ತಮ ಆಡಳಿತ, ಭ್ರಷ್ಟಾಚಾರ, ಕುಟುಂಬ ರಾಜಕೀಯದ ವಿರುದ್ಧ ಸ್ಪಷ್ಟನಿಲುವುಗಳನ್ನು ಜನರ ಮುಂದಿಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ನಾವು ರಾಜ್ಯದಲ್ಲಿ ನೆಲೆ ಕಾಣಬೇಕಾದರೆ ಏಕಾಂಗಿಯಾಗಿ ಕಣಕ್ಕೆ ಇಳಿಯುವುದು ಅನಿವಾರ್ಯವಾಗುತ್ತದೆ. ನಾನು ರಾಜಕೀಯಕ್ಕೆ ಬಂದಿರುವುದು ರಾಜ್ಯದಲ್ಲಿ ಬದಲಾವಣೆ ತರುವ ಉದ್ದೇಶಕ್ಕಾಗಿಯೇ ಹೊರತೂ, ಎಐಎಡಿಎಂಕೆಯ ಕಿರಿಯ ಮಿತ್ರನಾಗಿ ಇರಲು ಅಲ್ಲ ಎಂದರು. ಮೈತ್ರಿಗೆ ಸಂಬಂಧಿಸಿದಂತೆ ತಮ್ಮ ನಿಲುವನ್ನು ವಿವರಿಸಲು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆಗೆ ಸಮಯ ಕೇಳಿರುವುದಾಗಿ ಸಭೆಯಲ್ಲಿ ತಿಳಿಸಿದ್ದಾರೆ.