Friday, September 29, 2023
spot_img
- Advertisement -spot_img

ಸಿಎಂ ಸಿದ್ದರಾಮಯ್ಯ ಅವರಿಗೂ ತಟ್ಟಲಿದೆಯಾ ಬಂದ್‌ ಬಿಸಿ?

ಬೆಂಗಳೂರು :ಶಕ್ತಿ ಯೋಜನೆಯ ವಿರುದ್ಧ ರಾಜ್ಯ ರಾಜಧಾನಿಯಲ್ಲಿ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಪ್ರವಾಸ ಕೈಗೊಂಡಿದ್ದಾರೆ.

ಇದನ್ನೂ ಓದಿ : ನೈತಿಕತೆ ಇಲ್ಲದವ್ರು, ನೈತಿಕ ಬೆಂಬಲ ನೀಡ್ತಿದ್ದಾರೆ : ರಾಮಲಿಂಗಾ ರೆಡ್ಡಿ

ಇಂದು ಬೆಳಗ್ಗೆ 10.30 ಸುಮಾರಿಗೆ ಮೈಸೂರಿಗೆ ತೆರಳಲಿರುವ ಸಿದ್ದರಾಮಯ್ಯ ಅವರು, ಪ್ರವಾಸ ಕೈಗೊಳ್ಳುವ ಮುನ್ನ ಬೆಂಗಳೂರಿನ ಅರಣ್ಯ ಭವನದಲ್ಲಿ ”ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ” ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ : ಖಾಸಗಿ ಸಾರಿಗೆ ಬಂದ್: ವಿಮಾನ ನಿಲ್ದಾಣದಿಂದ ಹೆಚ್ಚುವರಿ ಬಸ್ ಸಂಚಾರ

ಇದರ ನಡುವೆಯೇ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರ್ ಬಂದ್ ಗೆ ಕರೆ ನೀಡಿದ್ದು, ಸದ್ಯ ಪ್ರತಿಭಟನೆಯನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಸಿಎಂ ಮನೆಗೆ ಪ್ರತಿಭಟನಾ ಕಾರರಿಂದ ಮುತ್ತಿಗೆ ಹಾಕಲು ತಯಾರಿ ನಡೆದಿದೆಯಾ ಎಂಬ ಮಾಹಿತಿ ಕೇಳಿಬರುತ್ತಿದೆ.

ಇದನ್ನೂ ಓದಿ : ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತಟ್ಟಿದ ಬಂದ್ ಬಿಸಿ!..

ಖಾಸಗಿ ಸಾರಿಗೆ ಒಕ್ಕೂಟದ ಪ್ರಮುಖ ಬೇಡಿಕೆಗಳೇನು?
* ಖಾಸಗಿ ಬಸ್‌ಗಳನ್ನ ಶಕ್ತಿಯೋಜನೆ ವ್ಯಾಪ್ತಿಗೆ ತರಬೇಕು
* 3.64 ಲಕ್ಷ ಆಟೋ ಚಾಲಕರಿಗೆ ಮಾಸಿಕ 10 ಸಾವಿರ ನೀಡಬೇಕು
* ರ‍್ಯಾಪಿಡೋ ಬೈಕ್ ಟ್ಯಾಕ್ಸಿ ನಿಷೇಧ ಮಾಡಬೇಕು
* 10-15 ಲಕ್ಷ ಮೌಲ್ಯದ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲು ಈ ಹಿಂದಿನ ನಿಯಮವೇ ಜಾರಿಗೆ ತರಬೇಕು
* ಏರ್‌ಪೋರ್ಟ್ ಟ್ಯಾಕ್ಸಿಗಳಿಗೆ ಒಂದೇ ದರ ನಿಗದಿ ಮಾಡಬೇಕು
* ಅಸಂಘಟಿತ ವಾಣಿಜ್ಯ ಚಾಲಕರ ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು
* ಚಾಲಕರಿಗೆ ವಸತಿ ಯೋಜನೆ ನೀಡಬೇಕು

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles