ಬೆಂಗಳೂರು : ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರ ಜನ್ಮದಿನದ ಪ್ರಯುಕ್ತ ವಿವಿಧ ರಾಜಕೀಯ ಗಣ್ಯರು ಶುಭಾಶಯ ತಿಳಿಸಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಬಹುಭಾಷಾ ನಟರು, ಆತ್ಮೀಯರಾದ ಕಿಚ್ಚ ಸುದೀಪ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನು ನಿಮಗೆ ಉತ್ತಮ ಆಯುರಾರೋಗ್ಯ ನೀಡಿ, ನಿಮ್ಮ ಕನಸುಗಳೆಲ್ಲವೂ ಈಡೇರಿ, ಕನ್ನಡ ಚಿತ್ರರಂಗದ ಖ್ಯಾತಿ ಮತ್ತಷ್ಟು ಉತ್ತುಂಗಕ್ಕೇರಲಿ ಎಂದು ಶುಭ ಹಾರೈಸುತ್ತೇನೆ ಎಂದಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಭಾವಂತ ಕಲಾವಿದ, ಬಹುಭಾಷಾ ಪ್ರತಿಭೆ, ನಮ್ಮೆಲ್ಲರ ನೆಚ್ಚಿನ ಕಿಚ್ಚ ಸುದೀಪ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಉತ್ತಮ ಆರೋಗ್ಯವನ್ನು, ದೀರ್ಘಾಯುಷ್ಯವನ್ನು ಮತ್ತು ಚಿತ್ರರಂಗದ ಹಾಗೂ ಸಮಾಜಸೇವೆಯ ತಮ್ಮ ಎಲ್ಲ ಪ್ರಯತ್ನಗಳಿಗೆ ಮತ್ತಷ್ಟು ಯಶಸ್ಸನ್ನು ಕರುಣಿಸಲೆಂದು ಹಾರೈಸುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ವಿಶ್ ಮಾಡಿದ್ದಾರೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ಕನ್ನಡ ಚಿತ್ರರಂಗಕ್ಕೆ ನಿಮ್ಮ ಕೊಡುಗೆ ಅಪಾರ ಎಂದು ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.