Monday, December 11, 2023
spot_img
- Advertisement -spot_img

ಸಮಾನತೆ ಇಲ್ಲದ ಮೇಲೆ ಅದು ಧರ್ಮವೇ ಅಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಧರ್ಮದಲ್ಲಿ ಸಮಾನತೆ ಇಲ್ಲವೋ ಅದು ಧರ್ಮವೇ ಅಲ್ಲ; ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಬೇಧಭಾವ ಇರುತ್ತೋ ಅದು ಧರ್ಮವಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ.

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udayanidhi stalin) ಹೇಳಿಕೆ ವಿಚಾರವಾಗಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ‘ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ; ಯಾವ ಧರ್ಮದಲ್ಲಿ ಸಮಾನತೆ ಇಲ್ಲವೋ ಅದು ಧರ್ಮನೇ ಅಲ್ಲ. ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಬೇಧ ಭಾವ ಇರುತ್ತೋ ಅದು ಧರ್ಮವಲ್ಲ. ನಾವೆಲ್ಲರೂ ಸಂವಿಧಾನದ ಅಡಿಯಲ್ಲಿ ಇದ್ದೇವೆ, ಸಂವಿಧಾನವೇ ನಮ್ಮ ಧರ್ಮ, ಬುದ್ಧ, ಬಸವ ಹಾಕಿಕೊಟ್ಟಿರುವುದನ್ನ ಅನುಸರಿಸುತ್ತೇವೆ’ ಎಂದು ಹೇಳಿದರು.

ಇದನ್ನೂ ಓದಿ; ಸ್ಟಾಲಿನ್ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಮಹದೇವಪ್ಪ

ಉಚಿತ ಯೋಜನೆಗಳನ್ನು ವಿರೋಧಿಸಿ ಪ್ರಧಾನಿ ಮೋದಿ ಹೇಳಿಕೆ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ‘ಕರ್ನಾಟಕದಲ್ಲಿ ಕಾಂಗ್ರೆಸ್ (Congress) ಬಂದ್ಮೇಲೆ ಪ್ರಧಾನಿಗೆ ದೇಶದ ಆರ್ಥಿಕತೆ ಮೇಲೆ ಪ್ರೀತಿ ಬಂದಿದೆ. ಅವರು ಬರೀ ಮನ್ ಕೀ ಬಾತ್ ಅಂತಾರೆ, ಆರ್ಥಿಕತೆ ಬಗ್ಗೆ ಒಂದು ಮಾತನ್ನೂ ಆಡುವುದಿಲ್ಲ. ಬಿಜೆಪಿ ಒಂದು ಶ್ವೇತ ಪತ್ರ ಹೊರಡಿಸಲಿ, ನಾವು ಇವರ ಬಳಿ ಪಾಠ ಕಲಿಯುವ ಅವಶ್ಯಕತೆ ಇಲ್ಲ. ರಾಜ್ಯ ಆರ್ಥಿಕವಾಗಿ ಸುಭದ್ರವಾಗಿದೆ’ ಎಂದು ಪ್ರಿಯಾಂಕ್ ಖರ್ಗೆ (Priyank Kharge) ತಿರುಗೇಟು ಕೊಟ್ಟರು.

‘ಗ್ಯಾರಂಟಿಯಿಂದ ಆರ್ಥಿಕ ದಿವಾಳಿ ಅಂತೀರಾ. ಆದರೆ, ನಮ್ಮ ಗೃಹಲಕ್ಷ್ಮಿ ಯೋಜನೆಗಳನ್ನೇ ಕಾಪಿ ಮಾಡ್ತೀರಿ. ಕೊರೋನಾದಿಂದ ದೇಶ ಆರ್ಥಿಕವಾಗಿ ದಿವಾಳಿ ಆಗಿದೆ. ನೀವು ಕರ್ನಾಟಕದ ಆರ್ಥಿಕ ಪರಿಸ್ಥಿತಿ ಬಗ್ಗೆ ಚಿಂತೆ ಮಾಡ್ಬೇಡಿ. ಕರ್ನಾಟಕದಲ್ಲಿ 16 ಬಜೆಟ್ ಮಂಡಿಸಿದ ಸಿದ್ದರಾಮಯ್ಯ ನವರು ಇದ್ದಾರೆ; ನೀವು ದೇಶವನ್ನ ನೋಡಿಕೊಳ್ಳಿ ಸಾಕು. ರಾಜ್ಯಕ್ಕೆ ಸಿಎಂ ಸಿದ್ದರಾಮಯ್ಯ ಇದ್ದಾರೆ’ ಎಂದು ಪ್ರಿಯಾಂಕ್ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles