ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ನೀಡಿದ ಸೀರೆಗಳಿಗೆ ಬೆಂಕಿ ಇಟ್ಟು ದಾವಣಗೆರೆ ದಕ್ಷಿಣ ಕ್ಷೇತ್ರದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ, ಪ್ರತ್ರ ದಾವಣಗೆರೆ ಉತ್ತರ ಕ್ಷೇತ್ರದ ಮಾಜಿ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ಕೆಟಿಜೆ ನಗರದ ಠಾಣೆಯಲ್ಲಿ FIR ದಾಖಲಾಗಿದೆ. ದಾವಣಗೆರೆ ದಕ್ಷಿಣ ಹಾಗೂ ಉತ್ತರ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸೀರೆ ಹಂಚಿ ಮತ ಹಾಕುವಂತೆ ಓಲೈಸಲಾಗಿತ್ತು. ಆದ್ರೆ ಕೆಲ ಮಹಿಳೆಯರು ರಸ್ತೆಯಲ್ಲಿ ಸೀರೆ ಸುಟ್ಟು ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ಅಭಿವೃದ್ಧಿ ಮಾಡಿಲ್ಲ ಈಗ ಸೀರೆ ಹಂಚುತ್ತಿದ್ದಾರೆ ಎಂದು ಗರಂ ಆಗಿದ್ದಾರೆ. ಇನ್ನು ಮತ್ತೊಂದೆಡೆ ಶಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಿಮ್ಮ 60 ರೂಪಾಯಿ ಸೀರೆ ಉಟ್ಟುಕೊಳ್ಳುವಷ್ಟು ನಿರ್ಗತಿಕರಲ್ಲ ಎಂದು ರಸ್ತೆಯಲ್ಲಿ ಸೀರೆಗಳಿಗೆ ಬೆಂಕಿ ಇಟ್ಟು ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಶಾಸಕ ಎಸ್ ಎಸ್ ಮಲ್ಲಿಕಾರ್ಜುನ ಭಾವಚಿತ್ರ ವಿರುವ ಬ್ಯಾಗ್ ನಲ್ಲಿ ಸೀರೆಗಳನ್ನು ಹಂಚಲಾಗಿತ್ತು. ದಾಳಿ ನಡೆಸಿ 7.19 ಲಕ್ಷ ಮೌಲ್ಯದ ವಸ್ತು ಪೊಲೀಸರು ವಶಪಡಿಸಿಕೊಂಡಿದ್ದಾರೆ .