ರಾಮನಗರ ನಗರಸಭೆ ಸದಸ್ಯರಾಗಿ 7 ತಿಂಗಳ ಬಳಿಕ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್‌ಗೆ ಒಲಿದಿದೆ.
ರಾಮನಗರ ನಗರಸಭೆಯ ಅಧ್ಯಕ್ಷರಾಗಿ 30ನೇ ವಾರ್ಡ್‌ನಕಾಂಗ್ರೆಸ್ ಸದಸ್ಯೆ ಪಾರ್ವತಮ್ಮ, ಉಪಾಧ್ಯಕ್ಷರಾಗಿ 1ನೇವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಜಯಲಕ್ಷ್ಮಮ್ಮ ಆಯ್ಕೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ.
ಒಟ್ಟು 31 ಸದಸ್ಯ ಬಲ ಹೊಂದಿರುವ ರಾಮನಗರ ನಗರಸಭೆ
ರಾಮನಗರ ನಗರಸಭೆಯೂ ಒಟ್ಟು 31 ಸದಸ್ಯ ಬಲವನ್ನು ಹೊಂದಿದೆ. ಇದರಲ್ಲಿ ಕಾಂಗ್ರೆಸ್-19, ಜೆಡಿಎಸ್- 11, ಪಕ್ಷೇತರ 1 ಸ್ಥಾನದಲ್ಲಿ ಗೆಲುವು ಸಾಧಿಸಿದ್ದರು. ನಿನ್ನೆ ನಡೆದಿದ್ದ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಸಂಸದ ಡಿ.ಕೆ. ಸುರೇಶ್ ಹಾಗೂ ಕ್ಷೇತ್ರದಶಾಸಕಿ ಅನಿತಾ ಕುಮಾರಸ್ವಾಮಿ ಪಾಲ್ಗೊಂಡು ತಮ್ಮ ತಮ್ಮಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸಿಸಿದರು.