ಬೆಂಗಳೂರು: ಮನೆಯೊಡತಿಗೆ ಪ್ರತಿ ತಿಂಗಳು ಎರಡು ಸಾವಿರ ಹಣ ನೀಡುವ ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿಗೆ ಇಂದು ಮೈಸೂರಿನಲ್ಲಿ ಅದ್ಧೂರಿ ಚಾಲನೆ ನೀಡಲಾಯಿತು. ಇತ್ತ ಮಹಿಳೆಯರು ರಾಜ್ಯಾದ್ಯಂತ ತಮ್ಮ ನಿವಾಸದ ಮುಂದೆ ಗೃಹಲಕ್ಷ್ಮಿ ಯೋಜನೆಗಾಗಿ ವಿಶೇಷ ರಂಗೋಲಿ ಬಿಡಿಸಿ ಸ್ವಾಗತಿಸಿದ್ದಾರೆ.


ಈ ಯೋಜನೆ ಅನುಷ್ಠಾನಕ್ಕಾಗಿ ಕಾತರದಿಂದ ಕಾದಿದ್ದ ಇಡೀ ರಾಜ್ಯದ ಕೋಟ್ಯಂತರ ಮಹಿಳೆಯರು ಸದ್ಯ ಫುಲ್ ಖುಷ್ ಆಗಿದ್ದಾರೆ.


ಮೈಸೂರಿನಲ್ಲಿ ಗೃಹಲಕ್ಷ್ಮಿಗೆ ಚಾಲನೆಗೆ ಅದ್ಧೂರಿ ಕಾರ್ಯಕ್ರಮವನ್ನು ಕಾಂಗ್ರೆಸ್ ಸರ್ಕಾರ ಆಯೋಜಿಸಿತ್ತು.


ಅಲ್ಲದೆ, ರಾಜ್ಯಾದ್ಯಂತ ಏಕಕಾಲಕ್ಕೆ ಈ ಯೋಜನೆ ಜಾರಿ ಮಾಡುವ ಉದ್ದೇಶದಿಂದ ಜಿಲ್ಲಾವಾರು ಪ್ರತ್ಯೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.


ಇನ್ನು ಮಹಿಳೆಯರು ಇಂದು ಗೃಹಲಕ್ಷ್ಮಿ ಯೋಜನೆಯನ್ನು ಬರಮಾಡಿಕೊಳ್ಳಲು ತಮ್ಮ ತಮ್ಮ ಮನೆಗಳ ಮುಂದೆ ಸೊಗಸಾದ ರಂಗೋಲಿಗಳನ್ನು ಬಿಡಿಸಿ, ಗೃಹಲಕ್ಷ್ಮಿಗೆ ಸ್ವಾಗತ ಎಂಬ ಸಾಲುಗಳನ್ನೂ ರಂಗೋಲಿಯಲ್ಲಿ ಚಿತ್ರಿಸಿದ್ದಾರೆ.


ರಾಜ್ಯಾದ್ಯಂತ ಹಲವು ಮಹಿಳೆಯರು ತಮ್ಮ ಮನೆಗಳ ಮುಂದೆ ರಂಗೋಲಿ ಬಿಡಿಸಿದ್ದು, ಈ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.










ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.