ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಸೀಟುಗಳನ್ನು ಮೀಸಲಿಡುವ ಮಸೂದೆಗೆ ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಸರ್ಕಾರವು ಅಧಿಕೃತವಾಗಿ ಇನ್ನೂ ಘೋಷಿಸಿಲ್ಲ.
ಇಂದು ನಡೆದ ಸಂಸತ್ ವಿಶೇಷ ಅಧಿವೇಶನದ ಬಳಿಕ ಸಂಪುಟ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತಂತೆ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ಜೊತೆಗೆ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಐತಿಹಾಸಿಕ ಸ್ಮಾರಕದ ಸಾಲಿಗೆ 96 ವರ್ಷ ಹಳೆಯ ಸಂಸತ್ ಭವನ ಸೇರ್ಪಡೆ
2008 ರಲ್ಲಿ ರಚಿಸಲಾದ ಮಸೂದೆಯು 2010 ರಲ್ಲಿ ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ್ಟಿತ್ತು. ಆದರೆ ಕೆಳಮನೆಯಲ್ಲಿ ಅಂಗೀಕಾರ ಪಡೆದಿರಲಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ಯಾವಾಗಲೂ ಮಸೂದೆಯನ್ನು ಬೆಂಬಲಿಸುತ್ತಿದ್ದರೂ, ಇತರ ಪಕ್ಷಗಳಿಂದ ವಿರೋಧ ವ್ಯಕ್ತವಾಗುತ್ತಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.