ನವದೆಹಲಿ : ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ಸಂಸ್ಥೆಯು ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ನ ಸದಸ್ಯತ್ವವನ್ನು ರದ್ದು ಮಾಡಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಯದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.
ಜೂನ್ 2023ಕ್ಕೆ ಭಾರತೀಯ ಕುಸ್ತಿ ಫೆಡರೇಷನ್ ನ ಚುನಾವಣೆ ನಡೆಸಬೇಕಾಗಿತ್ತು. ಆದರೆ, ಕುಸ್ತಿ ಫೆಡರೇಷನ್ ಅಧ್ಯಕ್ಷರ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದ ಹಿನ್ನೆಲೆ ಚುನಾವಣೆ ನಡೆದಿರಲಿಲ್ಲ. ಕುಸ್ತಿಪಟುಗಳ ಸರಣಿ ಪ್ರತಿಭಟನೆಗಳು ಮತ್ತು ವಿವಿಧ ರಾಜ್ಯಗಳಲ್ಲಿ ಫೆಡರೇಷನ್ ಅಧ್ಯಕ್ಷರ ವಿರುದ್ಧ ಕೇಸ್ ದಾಖಲಾಗಿರುವ ಕಾರಣ ಚುನಾವಣೆಯನ್ನು ಪದೇ ಪದೇ ಮುಂದೂಡಲಾಗಿದೆ.
ಇದನ್ನೂ ಓದಿ : ಚಂದ್ರಯಾನ 3 ಯಶಸ್ವಿ: ಪ್ರಧಾನಿ ಮೋದಿಯನ್ನು ಶ್ಲಾಘಿಸಿದ ಎಂ.ಬಿ ಪಾಟೀಲ್
ಮೇ 30ರಂದು ಭಾರತೀಯ ಕುಸ್ತಿ ಫೆಡರೇಷನ್ ಗೆ ಪತ್ರ ಬರೆದಿದ್ದ ಯುನೈಟೆಡ್ ವರ್ಲ್ಡ್ ರೆಸ್ಲಿಂಗ್ ಸಂಸ್ಥೆ ಮುಂದಿನ 45 ದಿನಗಳಲ್ಲಿ (ಜುಲೈ 15 ರೊಳಗೆ) ಚುನಾವಣೆ ನಡೆಸದಿದ್ದರೆ ಸದಸ್ಯತ್ವ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿತ್ತು.
ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದ ಬಳಿಕ ಬಿಜೆಪಿ ನಾಯಕ, ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ಡಬ್ಲ್ಯುಎಫ್ಐ ನ ದಿನನಿತ್ಯದ ವ್ಯವಹಾರಗಳನ್ನು ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನಿಂದ ರಚಿತವಾದ ಭೂಪೇಂದರ್ ಸಿಂಗ್ ಬಾಜ್ವಾ ನೇತೃತ್ವದ ಸಮಿತಿಯು ನಿರ್ವಹಿಸುತ್ತಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.