ನವದೆಹಲಿ : ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಅಪರಾಧವನ್ನು ಯಾರಾದರೂ ಮಾಡಿದರೆ, ‘ಯಮರಾಜ’ ಅವರಿಗಾಗಿಯೇ ಕಾಯುತ್ತಿದ್ದಾನೇ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಿಳೆಯರಿಗೆ ಕಿರುಕುಳ ನೀಡುವ ವ್ಯಕ್ತಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಯೋಗಿ ಅವರು, ಕಿರುಕುಳ, ಅತ್ಯಾಚಾರ, ಸುಲಿಗೆ ಸೇರಿದಂತೆ ಮಹಿಳೆಯರಿಗೆ ಕಿರುಕುಳ ನೀಡುವ ಯತ್ನಗಳು ನಡೆದರೆ ಆತನಿಗೆ ಯಮರಾಜ ಕಾಯುತ್ತಿರುತ್ತಾನೆ ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ಇದನ್ನೂ ಓದಿ : Special Session : ಸಂಸತ್ತಿನ ವಿಶೇಷ ಅಧಿವೇಶನ : ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ
ಶುಕ್ರವಾರ ಆಯತಪ್ಪಿ ರಸ್ತೆಗೆ ಬಿದ್ದ ಬಾಲಕಿಯೊಬ್ಬಳ ಮೇಲೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಬೈಕಿನ ವ್ಯಕ್ತಿ ಬಾಲಕಿಯ ಮೇಲೆ ಬೈಕ್ ಹತ್ತಿಸಿ ಹತ್ಯೆಗೈದಿದ್ದ, ಶನಿವಾರ ರಾತ್ರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಂಬೇಡ್ಕರ್‌ನಗರದ ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿನ್ಹಾ, ಆರೋಪಿಗಳಲ್ಲಿ ಇಬ್ಬರಿಗೆ ಕಾಲಿಗೆ ಗುಂಡು ತಗುಲಿದ್ದು, ಬಂಧನದಿಂದ ಪರಾರಿಯಾಗಲು ಪ್ರಯತ್ನಿಸುವಾಗ ಒಬ್ಬನ ಕಾಲು ಮುರಿದಿದೆ ಎಂದು ಹೇಳಿದ್ದಾರೆ.
ಭಾನುವಾರ 343 ಕೋಟಿ ರೂ.ಗಳ 76 ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿಎಂ ಯೋಗಿ ಇಲ್ಲೂ ಅದೇ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಕ್ರಮಗಳನ್ನು ಕೈಗೊಂಡಿದ್ದು ಅಲ್ಲದೆ ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಒತ್ತಿ ಹೇಳಿದ್ದಾರೆ.
ಇದನ್ನೂ ಓದಿ : ಸಂವಿಧಾನ-ಪ್ರಜಾಪ್ರಭುತ್ವದ ರಕ್ಷಣೆ ನಮ್ಮ ಜವಾಬ್ದಾರಿ: ಮಲ್ಲಿಕಾರ್ಜುನ ಖರ್ಗೆ
ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯು ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಭಾಯಿಸುತ್ತಿರುವುದನ್ನು ತನ್ನ ಸಾಧನೆಗಳಲ್ಲಿ ಒಂದು ಎಂದು ಆಗಾಗ್ಗೆ ಹೇಳಿಕೊಳ್ಳುತ್ತಿರುತ್ತಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.