ಚುನಾವಣಾ ಆಯುಕ್ತರನ್ನ ಪುಢಾರಿ ಎಂದ ಯತೀಂದ್ರ ಸಿದ್ದರಾಮಯ್ಯ, ಮತ್ತೊಂದು ವಿವಾದ

ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿ ಸದ್ಯ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನರ್‌ ರಚನೆಯ ಚರ್ಚೆ ಜೋರಾಗೇ ನಡೆಯುತ್ತಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಉತ್ತರಾಧಿಕಾರಿ ಹೇಳಿಕೆ ಕಾಂಗ್ರೆಸ್​​ನಲ್ಲಿ ಹಲ್​ ಚಲ್​ ಎಬ್ಬಿಸಿದೆ. ನವೆಂಬರ್ ಕ್ರಾಂತಿಯ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಮುಂದಿನ ಉತ್ತರಾಧಿಕಾರಿ ಸತೀಶ್ ಜಾರಿಕಿಹೊಳಿ ಎಂದು ಯತೀಂದ್ರ ಸ್ಫೋಟಕ ಹೇಳಿಕೆ ಸಂಚಲನ ಸೃಷ್ಟಿಸಿದೆ. ಇದರೊಂದಿಗೆ ಸಿದ್ದರಾಮಯ್ಯ ತಮ್ಮ ಪುತ್ರನ ಮೂಲಕ ಉತ್ತರಾಧಿಕಾರಿಯ ದಾಳ ಉರುಳಿಸಿದ್ದಾರಾ? ಎಂಬ ಚರ್ಚೆಗಳು ಶುರುವಾಗಿವೆ. ಈ ನಡುವೆ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ನಗರಲ್ಲಿ ಮಾತನಾಡಿದ ಅವರು, ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಫುಡಾರಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿನಲ್ಲಿಂದು ವೋಟ್‌ ಚೋರ್‌ ಗದ್ದಿ ಛೋಡೊ ಅಭಿಯಾನದ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಯತೀಂದ್ರ, ರಾಹುಲ್ ಗಾಂಧಿ ಅವರು ಮತಗಳ್ಳತನವನ್ನು ಸಾಕ್ಷಿ ಸಮೇತ ಬಹಿರಂಗಪಡಿಸಿದ್ದಾರೆ.ಆದರೆ ಚುನಾವಣಾ ಆಯುಕ್ತರು ರಾಹುಲ್ ಗಾಂಧಿಯವರ ತೇಜೋವಧೆ ಮಾಡುತ್ತಿದ್ದಾರೆ. ರಾಜಕೀಯ ಪುಢಾರಿ ರೀತಿ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Leave a Reply

Your email address will not be published. Required fields are marked *